
ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಸಿಎಂ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯಪಾಲರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಅವರು ಕ್ವಾರಂಟೈನ್ ಆಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ರಾಜಭವನ ಮಾಹಿತಿ ನೀಡಿದೆ.
ರಾಜ್ಯಪಾಲರಿಗೆ ಕೋವಿಡ್ ಪಾಸಿಟಿವ್ ಎಂದು ತಿಳಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಕೊರೊನಾ ಸೋಂಕಿಗೆ ಒಳಗಾಗಿರುವ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ