LatestUncategorized

ಬಾಯಿ ಚಪಲಕ್ಕೆ ಏನೇನೋ ಮಾತನಾಡುವುದಲ್ಲ…

ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ವೀಕ್ ಸಿಎಂ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಗೋವಿಂದ ಕಾರಜೋಳ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಸಚಿವ ಕಾರಜೋಳ, ಸಿಎಂ ಬೊಮ್ಮಾಯಿ ವೀಕ್ ಸಿಎಂ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಅವನೇ 5 ವರ್ಷ ಸಿಎಂ ಇದ್ದನಲ್ಲ ಆಗ ಯಾಕೆ ಗಡಿ ಸಮಸ್ಯೆ ಬಗೆಹರಿಸಲಿಲ್ಲ.? ಸುಮ್ಮನೇ ಬಾಯಿ ಚಪಲಕ್ಕೆ ಏನೇನೋ ಮಾತನಾಡುವುದಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

60 ವರ್ಷ ಆಡಳಿತದಲ್ಲಿದ್ದ ಕಾಂಗ್ರೆಸ್ ಸಮಸ್ಯೆ ಸರಿಪಡಿಸಬಹುದಿತ್ತು. ಅಂದಿನ ಕಾಂಗ್ರೆಸ್ ತ್ರಿಬಲ್ ಇಂಜಿನ್ ಸರ್ಕಾರ ಯಾಕೆ ಮಾಡಲಿಲ್ಲ. ಗಡಿ ಸಮಸ್ಯೆ ಬಗೆಹರಿಸಬೇಡಿ ಎಂದು ಯಾರಾದರೂ ಆಣೆ ಹಾಕಿದ್ದರಾ? ಎಂದು ಪ್ರಶ್ನಿಸಿದ್ದಾರೆ.

*ಹಲವು ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ*

Home add -Advt

https://pragati.taskdun.com/karnatakarain2-daysimd/

ಬೆಳಗಾವಿ ಗ್ರಾಮೀಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

https://pragati.taskdun.com/various-development-works-started-in-belagavi-rural-constituency/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button