Kannada NewsKarnataka NewsLatest

*ಮತ್ತೊಂದು ಪಟಾಕಿ ದುರಂತ; ಓರ್ವ ಕಾರ್ಮಿಕ ಸಾವು*

ಪ್ರಗತಿವಾಹಿನಿ ಸುದ್ದಿ: ಪಟಾಕಿ ಇರಿಸಿದ್ದ ಆಲೆಮನೆಯಲ್ಲಿ ಸ್ಫೋಟ ಸಂಭವಿಸಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಜಿ ಕೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.

ತಮಿಳುನಾಡು ಮೂಲದ ರಮೇಶ್ (67) ಮೃತರು. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ಮಂಡ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಕಾಲಭೈರವೇಶ್ವರ ಹಬ್ಬಕ್ಕೆಂದು ಪಟಾಕಿ ಸಿಡಿಸಲು ತಮಿಳುನಾಡಿನಿಂದ ನಲವರು ಆಗಮಿಸಿದ್ದರು. ನಿನ್ನೆ ರಾತ್ರಿ ಗ್ರಾಮದಲ್ಲಿ ಅದ್ಧೂರಿಯಾಗಿ ಹಬ್ಬ ಆಚರಣೆ ಮಾಡಲಾಗಿತ್ತು. ಗ್ರಾಮದ ಆಲೆಮನೆಯಲ್ಲಿ ಪಟಾಕಿ ಸಂಗ್ರಹಿಸಿ ಅಲ್ಲಿಯೇ ನಾಲ್ವರು ತಂಗಿದ್ದರು. ಇಂದು ಬೇರೊಂದು ಗ್ರಾಮಕ್ಕೆ ಹೋಗಲು ಪಟಾಕಿ ತುಂಬುತ್ತಿದ್ದಾಗ ಏಕಾಏಕಿ ಪಟಾಕಿ ಸ್ಫೋಟಗೊಂಡಿದೆ.

ಸ್ಫೋಟದ ರಭಸಕ್ಕೆ ಹೆಂಚುಗಳು ಹಾರಿಹೋಗಿದ್ದು, ಇಡೀ ಆಲೆಮನೆ ಹೊತ್ತಿ ಉರಿದಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.


Related Articles

Back to top button