ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಜಲಸಂಪನ್ಮೂಲ ಸಚಿವರೂ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೋವಿಂದ ಕಾರಜೋಳ ಅವರು ಮಾಜಿ ಸಚಿವ, ಹಾಲಿ ಶಾಸಕ ರಮೇಶ ಜಾರಕಿಹೊಳಿಗೆ ಯಾರೋ ಒಬ್ಬ ವ್ಯಕ್ತಿ ಎಂದು ಉಲ್ಲೇಖಿಸಿದ್ದಾರೆ.
6 ಸಾವಿರ ರೂ. ಗಿಫ್ಟ್ ಕೊಟ್ಟರೆ ಮಾತ್ರ ಬಿಜೆಪಿಗೆ ಮತ ಹಾಕಿ ಎನ್ನುವ ರಮೇಶ ಜಾರಕಿಹೊಳಿ ಹೇಳಿಕೆ ಕುರಿತು ಪತ್ರಕರ್ತರು ಗೋವಿಂದ ಕಾರಜೋಳ ಅವರ ಪ್ರತಿಕ್ರಿಯೆ ಕೇಳಿದಾಗ, ನಮ್ಮ ಪಕ್ಷದಲ್ಲಿ ಅಂತಹ ವ್ಯವಸ್ಥೆಗೆ ಅವಕಾಶವಿಲ್ಲ. ನಮ್ಮ ಪಕ್ಷ ತತ್ವ ಸಿದ್ಧಾಂತದ ಮೇಲೆ ಕಟ್ಟಿದ ಪಕ್ಷ. ಪಕ್ಷದಲ್ಲಿ ತತ್ವ, ಸಿದ್ಧಾಂತಗಳಿಗೆ ಮೌಲ್ಯ ಇರುವುದರಿಂದ ಇಡೀ ದೇಶದಲ್ಲಿ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬಂದಿದೆ. ಮತ್ತು 2ನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. 2023ರ ಚುನಾವಣೆಯಲ್ಲಿ ಸಹ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. 2024ರ ಚುನಾವಣೆಯಲ್ಲಿ ಕೂಡ ನರೇಂದ್ರ ಮೋದಿ ನೇತೃತ್ವದಲ್ಲಿ ಅಧಿಕಾರಕ್ಕೆ ಬರಲಿದೆ ಎಂದರು.
ಪಕ್ಷದ ತತ್ವ, ಸಿದ್ಧಾಂತಗಳನ್ನು ಗಾಳಿಗೆ ತೂರಿ ಇಂತಹ ಹೇಳಿಕೆ ನೀಡಿರುವ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆಯೇ ಎನ್ನುವ ಪ್ರಶ್ನೆಗೆ, ಯಾರೋ ಒಬ್ಬ ವ್ಯಕ್ತಿ ಏನಾದರೂ ಹೇಳಿಕೆ ಕೊಟ್ಟರ ಅದು ಪಕ್ಷದ ಹೇಳಿಕೆಯಾಗುವುದಿಲ್ಲ. ಅದು ಅವರ ವಯಕ್ತಿಕ ವಿಚಾರ ಎಂದರು.
5 ಬಾರಿ ಶಾಸಕರಾಗಿರುವ, ಮಾಜಿ ಸಚಿವರೂ ಆಗಿರುವ, ಬಿಜೆಪಿ ಸರಕಾರವನ್ನು ಅಸ್ಥಿತ್ವಕ್ಕೆ ತರುವಲ್ಲಿ ಕಾರಣಕರ್ತರೂ ಆಗಿರುವ ರಮೇಶ ಜಾರಕಿಹೊಳಿಗೆ ಹಿರಿಯ ಸಚಿವರೊಬ್ಬರು ಯಾರೋ ಒಬ್ಬ ವ್ಯಕ್ತಿ ಎಂದಿರುವುದು ವಿಪರ್ಯಾಸವಾಗಿದೆ.
ಅವರು ಮಾಡಿದ್ದಕ್ಕಿಂತ 10 ಕೋಟಿ ರೂ. ಹೆಚ್ಚು ಖರ್ಚು ಮಾಡುತ್ತೇವೆ – ಬಹಿರಂಗ ಸಭೆಯಲ್ಲೇ ರಮೇಶ ಜಾರಕಿಹೊಳಿ ಘೋಷಣೆ
https://pragati.taskdun.com/we-will-spend-10-crores-more-than-what-they-did-ramesh-jarakiholi-announced-in-the-open-meeting/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ