Kannada NewsLatest
ಸಚಿವ ಪ್ರಭು ಚವ್ಹಾಣ ಅವರಿಗೆ ಡಾ.ಸೋನಾಲಿ ಸರ್ನೋಬತ್ ಅಭಿವಂದನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ಯಶಸ್ವಿಯಾಗಿರುವ ರಾಜ್ಯ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ ಅವರಿಗೆ ಅಭಿನಂದನೆ ಸಲ್ಲಿಸಿರುವ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್, ರಾಜ್ಯದ ಜನರ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ.
ಗೋಹತ್ಯಾ ನಿಷೇಧ ಕಾಯ್ದೆ ಜಾರಿಗೆ ಸುಗ್ರಿವಾಜ್ಞೆ ಹೊರಡಿಸಲು ರಾಜ್ಯ ಸಚಿವಸಂಪುಟ ಸಭೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಸೋನಾಲಿ ಸರ್ನೋಬತ್ ಹೇಳಿಕೆ ನೀಡಿದ್ದಾರೆ.
ಹಲವಾರು ವರ್ಷಗಳಿಂದ ರಾಜ್ಯದ ಕೊಟ್ಯಂತರ ಜನರ ಬೇಡಿಕೆಯಾಗಿದ್ದ ಗೋಹತ್ಯಾ ನಿಷೇಧ ಕಾಯ್ದೆ ಜಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಯಶಸ್ವಿಯಾಗಿದೆ. ಇದು ಜನರ ಜಯವಾಗಿದೆ. ಹಾಗಾಗಿ ಮುಖ್ಯಮಂತ್ರಿ ಸೇರಿದಂತೆ ಸಚಿವಸಂಂಪುಟದ ಎಲ್ಲ ಸಚಿವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.




