Kannada NewsKarnataka News

*ಹೊರನಾಡಿನ ಕನ್ನಡ ಪತ್ರಕರ್ತರ ಹಿತ ಕಾಯಲು ಸರ್ಕಾರ ಬದ್ದ: ಕೆ.ವಿ.ಪ್ರಭಾಕರ್*

ಪ್ರಗತಿವಾಹಿನಿ ಸುದ್ದಿ: ಹೊರನಾಡಿನ ಕನ್ನಡಿಗರ ಅಭಿಮಾನ ದೊಡ್ಡದು. ಅಲ್ಲಿರುವ ಕನ್ನಡ ಪತ್ರಕರ್ತರ ಹಿತ ಕಾಯಲು ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಹೇಳಿದ್ದಾರೆ.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)

ಕಾಸರಗೋಡು ಘಟಕ, ಜಿಲ್ಲಾ ಕನ್ನಡ ಪತ್ರಕರ್ತರ ಸಂಘ, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ‌ ಸಂಯುಕ್ತ ಆಶ್ರಯದಲ್ಲಿ ಕಾಸರಗೋಡು ಸೀತಾಗೋಳಿ ಅಲೆಯನ್ಸ್ ಕನ್ವೆನ್ಷನ್ ಹಾಲ್ ನಲ್ಲಿ ಏರ್ಪಡಿಸಿದ್ದ ದತ್ತಿ ಪ್ರಶಸ್ತಿ ಪ್ರದಾನ ಮತ್ತು ಕನ್ನಡ ಸಂಸ್ಕತಿ ಉತ್ಸವ ಉದ್ಘಾಟಿಸಿ ಮಾತನಾಡಿದರು.

ವಿಶೇಷವಾಗಿ ಕಾಸರಗೋಡು ಕನ್ನಡಿಗರ ಭಾವನೆ ನಮ್ಮೆಲ್ಲರಿಗೆ ಅರ್ಥವಾಗಿದೆ. ನಿಮ್ಮ ಜೊತೆಯಲ್ಲಿ ಕರ್ನಾಟಕ ಸರ್ಕಾರ ಸದಾ ಇರಲಿದೆ. ಕನ್ನಡ ಶಾಲೆ ಮತ್ತು ಕನ್ನಡ ಪತ್ರಕರ್ತರಿಗೆ ಸಹಕಾರ ನೀಡಲಾಗುವುದು ಎಂದರು.

Home add -Advt

ಗಡಿ ನಾಡಿನ ಕಾಸರಗೊಡು ಪತ್ರಕರ್ತರ ಬಸ್ ಪಾಸ್ ಮತ್ತು ಕನ್ನಡ ಶಾಲೆಗೆ ನೆರವು ಸೇರಿದಂತೆ ನಿಮ್ಮ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಸಿಎಂ ಜೊತೆಗೆ ಮಾತನಾಡಿ ಅನುದಾನ ಕೊಡಿಸಲಾಗುವುದು ಎಂದರು.

ಸಿಎಂ ಜೊತೆಗೆ ಕಾಸರಗೋಡಿಗೆ ಹೋಗುವುದಾಗಿ ತಿಳಿಸಿದಾಗ ಅವರು ಕನ್ನಡಿಗರ ಅಭಿಮಾನದ ವಿಷಯ ತಿಳಿದು ಸಂತೋಷಪಟ್ಟರು. ಮುಂದೆ ಸಿಎಂ ಕೂಡ ನಿಮ್ಮ ಕಾರ್ಯಕ್ರಮದಲ್ಲಿ  ಭಾಗವಹಿಸುವ ಇಚ್ಛೆ  ವ್ಯಕ್ತಪಡಿಸಿದ್ದಾರೆ ಎಂದರು.

ಬೆಂಗಳೂರಿನಲ್ಲಿ ನಾವು ವರ್ಷಕ್ಕೊಮ್ಮೆ ರಾಜ್ಯೋತ್ಸವ ಕನ್ನಡಿಗರಾಗಿದ್ದೇವೆ. ಆದರೆ ಕಾಸರಗೋಡಿನ ಕನ್ನಡಿಗರು ವರ್ಷದ ಅನುಕಾಲವೂ ಕನ್ನಡ ಭಾಷೆ ಉಳಿಸುವ ಪ್ರಯತ್ನ ಮಾಡುತ್ತಿರುವುದು ಹೆಮ್ಮೆಯ ಮತ್ತು ಅಭಿಮಾನದ ಸಂಗತಿ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಕಾಸರಗೋಡು ದತ್ತಿ ಪ್ರಶಸ್ತಿ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ಮಾತನಾಡಿದರು. ಗಡಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಕೆಯುಡಬ್ಲ್ಯೂಜೆ ಕೇರಳ ಘಟಕ ಅಧ್ಯಕ್ಷ ಅಬ್ದುಲ್ ರೆಹಮಾನ್ ಸುಬ್ಬಯ್ಯಕಟ್ಟಿ ಮತ್ತಿತರರು ಹಾಜರಿದ್ದರು.

Related Articles

Back to top button