Kannada NewsLatest

ಕರ್ತವ್ಯನಿರತ ಸರ್ಕಾರಿ ನೌಕರ ಸಾವು

ಪ್ರಗತಿವಾಹಿನಿ ಸುದ್ದಿ, ಖಾನಾಪುರ:

ಸ್ಥಳೀಯ ಪೊಲೀಸ್ ತರಬೇತಿ ಶಾಲೆಯ ದ್ವಿತೀಯ ದರ್ಜೆ ಸಹಾಯಕ ಆರ್.ಪ್ರಸಾದ (೪೦) ಸೋಮವಾರ ಮುಂಜಾನೆ ಕಡಿಮೆ ರಕ್ತದೊತ್ತಡ ಮತ್ತು ಹೃದಯಾಘಾತದಿಂದ ನಿಧನರಾದರು.

Related Articles

ಮುಂಜಾನೆ ಎಂದಿನಂತೆ ಕಚೇರಿಗೆ ಆಗಮಿಸಿದ ಅವರು ಇದ್ದಕ್ಕಿದ್ದಂತೆ ನಿತ್ರಾಣಗೊಂಡು ಕುಸಿದು ಬಿದ್ದ ಹಿನ್ನೆಲೆಯಲ್ಲಿ ತರಬೇತಿ ಶಾಲೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಅವರನ್ನು ಸ್ಥಳೀಯ ತಾಲೂಕು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು ಎಂದು ಮೂಲಗಳು ತಿಳಿಸಿವೆ.

ಮೃತರಿಗೆ ತಾಯಿ, ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ.

Home add -Advt

ಹೆಚ್ಚಿನ ಸುದ್ದಿಗಳಿಗಾಗಿ pragativahini.com  ನೋಡಿ

Related Articles

Back to top button