*ಡೆಂಘಿ ಪ್ರಕರಣಗಳ ಟೆಸ್ಟಿಂಗ್ ಗೆ ಆಸ್ಪತ್ರೆಗಳಲ್ಲಿ ದರ ನಿಗದಿ ಮಾಡಿದ ಸರ್ಕಾರ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದೀಗ ಆರೋಗ್ಯ ಇಲಾಖೆ ಡೆಂಘಿ ಪ್ರಕರಣಗಳ ಟೆಸ್ಟಿಂಗ್ ಗೆ ಖಾಸಗಿ ಆಸ್ಪತ್ರೆಗಳಿಗೂ ದರ ನಿಗದಿ ಮಾಡಿದೆ.
ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದ ಆರೋಗ್ಯ ಇಲಾಖೆಯ ಸಭೆಯಲ್ಲಿ ದರ ನಿಗದಿ ಬಗ್ಗೆ ನಿರ್ಣಯ ಮಾಡಲಾಗಿದೆ.
IGM ಹಾಗೂ NS1 ಪರೀಕ್ಷೆ ಎರಡು ಪರೀಕ್ಷೆಗಳ ಅಗತ್ಯವಿದ್ದು, ಕೆಲ ಆಸ್ಪತ್ರೆಗಳಲ್ಲಿ ಹೆಚ್ಚಿನ ದರವನ್ನು ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಸರ್ಕಾರದಿಂದ ದರ ನಿಗದಿ ಮಾಡಲಾಗಿದ್ದು, ಎರಡೂ ಟೆಸ್ಟ್ ಗೆ ತಲಾ 300 ರೂ ನಂತೆ ಒಟ್ಟು 600 ರೂ ಗೆ ಡೆಂಘಿ ಪರೀಕ್ಷೆ ಮಾಡಬೇಕು ಎಂಬ ನಿರ್ಣಯ ಕೈಗೊಳ್ಳಲಾಗಿದೆ.
ಇನ್ನು ಈ ಬಗ್ಗೆ ಸಂಜೆ ಪರಿಷ್ಕೃತ ಸುತ್ತೋಲೆಯನ್ನು ಆರೋಗ್ಯ ಇಲಾಖೆ ಹೊರಡಿಸಲಿದೆ. ರಾಜ್ಯದೆಲ್ಲೆಡೆ ಒಂದೇ ದರ ಇರಬೇಕು ಎಂಬ ನಿಟ್ಟಿನಲ್ಲಿ ಈ ನಿರ್ಣಯ ಮಾಡಲಾಗಿದೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ