ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಆಸ್ಪತ್ರೆಯಲ್ಲಿಯೇ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ.
ಮಕ್ಕಳ ತಜ್ಞರಾಗಿದ್ದ ಡಾ.ಎಸ್.ರೇಣುಕಾನಂದ (43) ಆತ್ಮಹತ್ಯೆ ಮಾಡಿಕೊಂಡಿರುವ ವೈದ್ಯ. ಬೆಂಗಳೂರಿನ ಜಯನಗರ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿ ಡಾ.ಎಸ್.ರೇಣುಕಾನಂದ ಕಾರ್ಯನಿರ್ವಹಿಸುತ್ತಿದ್ದರು.
ಆಸ್ಪತ್ರೆಯ ವಾರ್ಡ್ ನಲ್ಲಿಯೇ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸಾವಿಗೂ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ.
ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಈ ಘನೆ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿಗಳು ತಿಲಕನಗರ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ