Kannada NewsKarnataka NewsLatest

*ಸರ್ಕಾರಿ ಶಾಲೆಯ ಬಿಸಿಯೂಟದ ಅನ್ನ-ಸಾಂಬಾರ್ ನಲ್ಲಿ ಹುಳುಗಳು ಪತ್ತೆ: ಪೋಷಕರ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಶಾಲೆಯಲ್ಲಿ ಕೊಡುವ ಮಧ್ಯಾಹ್ನದ ಬಿಸಿಯುಟದಲ್ಲಿ ಹುಳುಗಳು ಪತ್ತೆಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ವಿದ್ಯಾರ್ಥಿಗಳು, ಪೋಷಕರು ಶಾಲೆಯ ಮುಖ್ಯ ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾವಣಗೆರೆಯ ಜಗಳೂರು ತಾಲೂಕಿನ ಚಿಕ್ಕಬನ್ನಿಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದ ಅನ್ನ-ಸಾಂಬಾರ್ ನಲ್ಲಿ ಹುಳುಗಳು ಪತ್ತೆಯಾಗಿವೆ. ವಿಷಯ ತಿಳಿದ ಪೋಷಕರು ಶಾಲೆಗೆ ನುಗ್ಗಿ ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವಚ್ಛವಿಲ್ಲದ ಊಟ ನೀಡಿ ಮಕ್ಕಳ ಆರೋಗ್ಯವನ್ನು ಹಾಳು ಮಾಡುವ ಕೆಲಸ ಮಾಡುತ್ತಿದ್ದೀರಾ? ಶಿಕ್ಷಕರ ಬೇಜವಾಬ್ದಾರಿಗೆ ಮಕ್ಕಳು ಅನಾರೋಗ್ಯಕ್ಕೀಡಾಗುವ ಸ್ಥಿತಿ ಬಂದಿದೆ ಎಂದು ಕಿಡಿಕಾರಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button