
ಪ್ರಗತಿವಾಹಿನಿ ಸುದ್ದಿ: ಹಿರೇಬಾಗೇವಾಡಿ: ಹಿರೇಬಾಗೇವಾಡಿ ಗಾಂಧಿನಗರದ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಸುಮಾರು 28.02 ಲಕ್ಷ ರೂ,ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ 2 ಹೆಚ್ಚುವರಿ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಜನ ಪ್ರತಿನಿಧಿಗಳು, ಮುಖಂಡರು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿ ಗುರುವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಜೊತೆಗೆ, ಹಿರೇಬಾಗೇವಾಡಿಯ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲೂ ಸುಮಾರು 27.13 ಲಕ್ಷ ರೂ,ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ 2 ಹೆಚ್ಚುವರಿ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಜನ ಪ್ರತಿನಿಧಿಗಳು, ಮುಖಂಡರು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಸಿ. ಪಾಟೀಲ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಶ್ರೀ ಜಪ್ತಿ, ಸುರೇಶ ಇಟಗಿ, ಶ್ರೀಕಾಂತ ಮಾಧುಭರಮಣ್ಣವರ, ಅಡಿವೇಶ ಇಟಗಿ, ಪ್ರಕಾಶ ಜಪ್ತಿ ಸ್ವಾತಿ ಇಟಗಿ, ಗೌಸಮೊದ್ದಿನ ಜಾಲಿಕೊಪ್ಪ, ಸಲೀಂ ಸತ್ತಿಗೇರಿ, ಗಂಗಾಧರ್ ಅಗಸಿಮನಿ, ಬಸನಗೌಡ ಪಾಟೀಲ, ಇಮ್ತಿಯಾಜ್ ಕರಿದಾವಲ್, ಶಾಲಾ ಸಿಬ್ಬಂದಿ ಮುಂತಾದವರು ಉಪಸ್ಥಿತರಿದ್ದರು.