*7ನೇ ತರಗತಿ ವಿದ್ಯಾರ್ಥಿನಿ 6 ತಿಂಗಳ ಗರ್ಭಿಣಿ; ಅಪ್ರಾಪ್ತ ಬಾಲಕಿಯ ಈ ಸ್ಥಿತಿಗೆ ಕಾರಣ ಯಾರು?*

ಪ್ರಗತಿವಾಹಿನಿ ಸುದ್ದಿ: ಶಾಲಾ ಬಾಲಕಿಯೊಬ್ಬಳು 6 ತಿಂಗಳ ಗರ್ಭಿಣಿಯಾಗಿರುವ ಆಘಾತಕಾರಿ ಘಟನೆಯೊಂದು ನಡೆದಿದೆ. ಎಲ್ಲಾ ಮಕ್ಕಳಂತೆ ಆಟ-ಪಾಠವೆಂದು ಓದಿ ನಲಿಯಬೇಕಾಗಿದ್ದ ಬಾಲಕಿಯನ್ನು ಕಾಮುಕನೊಬ್ಬ ಈ ಸ್ಥಿತಿಗೆ ತಂದಿದ್ದು, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನವೇ ಘಟನೆ ಬೆಳಕಿಗೆ ಬಂದಿದೆ.
ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸರ್ಕಾರಿ ಶಾಲೆಯ 7 ನೇತರಗತಿ ವಿದ್ಯಾರ್ಥಿನಿ 6 ತಿಂಗಳ ಗರ್ಭಿಣಿಯಾಗಿದ್ದು, ಸದ್ಯ ಬಾಲಕಿಯನ್ನು ರಕ್ಷಿಸಲಾಗಿದೆ.
ಸಂಬಂಧಿಕ ಯುವಕನೇ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿದುಬಂದಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.
ಬಾಲಕಿಯನ್ನು ರಕ್ಷಿಸಿ ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ಆರೈಕೆ ಮಾಡಲಾಗುತ್ತಿದೆ. ಸಾರ್ವಜನಿಕರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದ್ದಾರೆ. 7ನೇ ತರಗತಿ ಓದುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರ ನಡೆದು, 6 ತಿಂಗಳ ಗರ್ಭಿಣಿಯಾಗಿದ್ದರೂ ಪೋಷಕರಿಗೆ ಈ ಬಗ್ಗೆ ತಿಳಿದಿಲ್ಲವೇ? ಇಷ್ಟೆಲ್ಲ ಆದರೂ ಬಾಲಕಿ ತಂದೆ-ತಾಯಿ ಬಳಿ ಹೇಳದೇ ಸುಮ್ಮನಿರಲು ಕಾರಣವಾದರೂ ಏನು? ಎಂಬುದು ಇನ್ನಷ್ಟೇ ತಿಳಿಯಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ