ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಶಾಲೆಗಳನ್ನು ಮತ್ತೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮೊದಲ ಹಂತದಲ್ಲಿ ಸರ್ಕಾರಿ ಶಾಲೆಗಳನ್ನು ಆರಂಭಿಸುವಂತೆ ತಜ್ಞರ ಸಮಿತಿ ಸರ್ಕಾರಕ್ಕೆ ಸೂಚನೆ ನೀಡಿದೆ.
ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವುದರಿಂದ ದೈಹಕ ಅಂತರ ಪಾಲನೆ ಕಷ್ಟ ಹಾಗಾಗಿ ಮೊದಲ ಹಂತವಾಗಿ ಸರ್ಕಾರಿ ಶಾಲೆಗಳನ್ನು ಆರಂಭಿಸಿ. ರಾಜ್ಯದಲ್ಲಿ 50ಕ್ಕಿಂತ ಕಡಿಮೆ ಮಕ್ಕಳಿರುವ 22 ಸಾವಿರ ಸರ್ಕಾರಿ ಶಾಲೆಗಳಿವೆ. ಅವುಗಳಲ್ಲಿ 5-6 ಕೊಠಡಿಗಳಿದ್ದು ಒಂದೊಂದು ಕೊಠಡಿಗಳಲ್ಲಿ 8-10 ವಿದ್ಯಾರ್ಥಿಗಳಿಗೆ ಪಾಠ ಮಾಡುವಂತೆ ಶಿಕ್ಷಕ ಸಿಬ್ಬಂದಿಗೆ ಸೂಚಿಸುವಂತೆ ಹೇಳಿದೆ.
ಇನ್ನು ಮಕ್ಕಳಿಗೆ ಮಾಸ್ಕ್, ದೈಹಿಕ ಅಂತರ ಪಾಲನೆ ಕಡ್ಡಾಯವಾಗಿದ್ದು ಎಲ್ಲಾ ರೀತಿಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಿದೆ.
ಲಸಿಕೆ ಬಳಿಕವೇ ಶಾಲಾ-ಕಾಲೇಜು ಆರಂಭ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ