ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಸರ್ಕಾರಿ ಶಾಲೆಯ ಮಕ್ಕಳಿಗೆ ಸಾಲು ಸಾಲು ಸಿಹಿಸುದ್ದಿ ನೀಡಿದೆ. ಇನ್ಮುಂದೆ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ಉಚಿತ ನೀರು ಪೂರೈಸಲು ನಿರ್ಧರಿಸಲಾಗಿದೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸರ್ಕಾರಿ ಶಾಲೆಗಳಿಗೆ ನವೆಂಬರ್ ನಿಂದ ಉಚಿತ ವಿದ್ಯುತ್, ನೀರು ಪೂರೈಸಲಾಗುವುದು ಎಂದು ಘೋಷಿಸಿದರು.
ಅದೆಷ್ಟೋ ಶಾಲೆಗಳು ವಿದ್ಯುತ್ ಬಿಲ್ ಗೆ ಹೆದರಿ ಕಂಪ್ಯೂಟರ್ ಬಳಸುವುದನ್ನೇ ನಿಲ್ಲಿಸಿವೆ. ಉಚಿತ ವಿದ್ಯುತ್, ನೀರು ನೀಡುವುದರಿಂದ ಶಾಲಾ ಮಕ್ಕಳಿಗೆ ಹಲವು ಅನುಕೂಲಗಳು ಆಗಲಿವೆ ಎಂದು ಹೇಳಿದರು.
ಇದೇ ವೇಳೆ ಶಾಲಾ ಮಕ್ಕಳಿಗೆ ಕ್ಷೀರ ಭಾಗ್ಯ ಹಾಲಿನಲ್ಲಿ ರಾಗಿ ಮಾಲ್ಟ್ ಕೊಡಲು ತೀರ್ಮಾನಿಸಲಾಗಿದೆ. ಮಕ್ಕಳ ಪೋಷ್ಠಿಕಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಕ್ಷೀರ ಭಾಗ್ಯ ಹಾಲಿನಲ್ಲಿ ರಾಗಿ ಮಾಲ್ಟ್ ಹಾಕಿ ಮೈಸೂರಿನ ಸಿಎಫ್ ಟಿ ಆರ್ ಐ ನಲ್ಲಿ ಟೆಸ್ಟ್ ಮಾಡಲಾಗುವುದು ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ