ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದ ಶಾಲೆಗಳಿಗೆ ಗುಣಮಟ್ಟದ ಸಮವಸ್ತ್ರ ಸರಬರಾಜು ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್.ಮಧುಬಂಗಾರಪ್ಪ ಅವರು ಹೇಳಿದರು.
ವಿಧಾನ ಪರಿಷತ್‌ನಲ್ಲಿ ಡಿಸೆಂಬರ್ 11ರಂದು ನಡೆದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಎನ್ ರವಿಕುಮಾರ ಅವರ ಪ್ರಶ್ನೆಗೆ ಉತ್ತರಿಸಿ, 2023-24ನೇ ಸಾಲಿಗೆ ಪ್ರತಿ ವಿದ್ಯಾರ್ಥಿಗೆ ಪಠ್ಯ ಪುಸ್ತಕಕ್ಕೆ ಸರಾಸರಿ 397 ರೂ. ವೆಚ್ಚ ಮಾಡಲಾಗಿದೆ. ಶೂ ಮತ್ತು ಸಾಕ್ಸಗಳಿಗೆ 1 ರಿಂಧ 5ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 265 ರೂ., 6 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ 295 ರೂ., ಹಾಗೂ 9 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ 325 ರೂ.ಗಳನ್ನು ವೆಚ್ಚ ಮಾಡಲಾಗಿದೆ. ಅದೇ ರೀತಿ 1 ರಿಂದ 10ನೇ ತರಗತಿವರೆಗೆ ಗಂಡು ಮಕ್ಕಳು ಮತ್ತು ಹೆಣ್ಣು ಮಕ್ಕಳಿಗೆ ತಲಾವಾರು ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
2023-24ನೇ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 55,43,828 ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಯೋಜನೆಯಡಿಯಲ್ಲಿ ಉಚಿತವಾಗಿ ಪಠ್ಯಪುಸ್ತಕಗಳನ್ನು ಹಾಗೂ 45,45,749 ವಿದ್ಯಾರ್ಥಿಗಳಿಗೆ ಸಮವಸ್ತç ಹಾಗೂ ಶೂ ಮತ್ತು ಸಾಕ್ಸಗಳನ್ನು ವಿತರಿಸಲಾಗಿದೆ.
2023-24ನೇ ಸಾಲಿನಲ್ಲಿ ವಿದ್ಯಾ ವಿಕಾಸ ಯೋಜನೆಯಡಿಯಲ್ಲಿ 55,43,828 ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 4,47,17,051 ಪಠ್ಯಪುಸ್ತಕಗಳನ್ನು ಜನವರಿ 2023 ರಿಂದ ಮಾರ್ಚ 2023ರವರೆಗೆ ಸರಬರಾಜು ಮಾಡಲಾಗಿದ್ದು ವಿದ್ಯಾರ್ಥಿಗಳಿಗೆ ಶಾಲೆಯ ಪ್ರಾರಂಭದ ದಿನದಂದು ವಿತರಿಸಲಾಗಿದೆ. 45,45,749 ವಿದ್ಯಾರ್ಥಿಗಳಿಗೆ ತಲಾ ಎರಡು ಜೊತೆ ಸಮವಸ್ತçಗಳನ್ನು ಒದಗಿಸಲಾಗಿದ್ದು ಮೊದಲ ಜೊತೆ ಸಮವಸ್ತçಗಳನ್ನು ಮಾರ್ಚ 2023 ರಿಂದ ಜೂನ್ 2023ರವರೆಗೆ ಹಾಗೂ ಎರಡನೇ ಜೊತೆ ಸಮವಸ್ತçಗಳನ್ನು ಜೂನ್ 2023ರಿಂದ ಸೆಪ್ಟೆಂಬರ್ 2023ರವರೆಗೆ ವಿತರಣೆ ಮಾಡಲಾಗಿದೆ. ಶೂ ಮತ್ತು ಸಾಕ್ಸ್ ಖರೀದಿ ಮಾಡಲು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳಿಗೆ ಜೂನ್ 2023ರಲ್ಲಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ