EducationKarnataka NewsLatest

*ವಾರದೊಳಗೆ ಶಾಲಾ ಮಕ್ಕಳಿಗೆ ಶೂ-ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಸರ್ಕಾರಿ ಶಾಲೆ ಮಕ್ಕಳಿಗೆ ಒಂದು ವಾರದೊಳಗೆ ಶೂ-ಸಾಕ್ಸ್ ವಿತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1ರಿಂದ 10ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲಾಗುವ ಶೂ-ಸಾಕ್ಸ್​ಗಳನ್ನು ವಿತರಿಸುವ ಕಾರ್ಯವನ್ನು ಒಂದು ವಾರದೊಳಗೆ ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.

Home add -Advt

ಪ್ರಸಕ್ತ ಶೈಕ್ಷಣಿಕ ಸಾಲಿನ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ವಿದ್ಯಾವಿಕಾಸ ಯೋಜನೆಯಡಿ ನೀಡಲಾಗುವ ಶೂ-ಸಾಕ್ಸ್​ಗಳನ್ನು ಶಾಲೆ ಆರಂಭವಾಗಿ ಮೂರು ತಿಂಗಳಾದರೂ ನೀಡಿಲ್ಲ ಎಂದು ಕಾಂಗ್ರೆಸ್ ಸದಸ್ಯೆ ಬಲ್ಕೀಸ್ ಬಾನು ಪ್ರಶ್ನೋತ್ತರ ಕಲಾಪದ ವೇಳೆ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಚಿವರು, ಶೂ – ಸಾಕ್ಸ್ ವಿತರಣೆ ವೇಳೆ ತಾಲೂಕು ಹಾಗೂ ಜಿಲ್ಲಾ ಮಟ್ಟದ ಟೆಂಡರ್​ಗಳಲ್ಲಿ ದಲ್ಲಾಳಿಗಳಿಂದ ಅವ್ಯವಹಾರಗಳು ನಡೆಯುತ್ತಿದ್ದವು. ಇದಕ್ಕೆ ಕಡಿವಾಣ ಹಾಕಲು ಮೊದಲ ಬಾರಿಗೆ ರಾಜ್ಯ ಮಟ್ಟದಲ್ಲಿ ಟೆಂಡರ್ ಕರೆಯಲಾಗಿದೆ‌. 36.56 ಲಕ್ಷ ವಿದ್ಯಾರ್ಥಿಗಳ ಪೈಕಿ 21.92 ಲಕ್ಷ ವಿದ್ಯಾರ್ಥಿಗಳಿಗೆ ನೀಡಲಾಗಿದೆ. 12.59 ಲಕ್ಷ ಶೂ.ಗಳು ಸಾಗಣೆ ಹಂತದಲ್ಲಿವೆ. 2 ಲಕ್ಷ ಶೂಗಳು ಉತ್ಪಾದನೆ ಹಂತದಲ್ಲಿವೆ. ಇನ್ನೊಂದು ವಾರದೊಳಗೆ ಎಲ್ಲಾ ವಿದ್ಯಾರ್ಥಿಗಳಿಗೆ ಶೂ-ಸಾಕ್ಸ್ ವಿತರಿಸಲಾಗುವುದು ಎಂದು ಆಶ್ವಾಸನೆ ನೀಡಿದರು.

Related Articles

Back to top button