Latest

ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಕೆ ಎಸ್ ಆರ್ ಟಿಸಿ ಹೆಚ್ಚುವರಿ ಬಸ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗೌರಿ ಗಣೇಶ ಹಬ್ಬದ ನಿಮಿತ್ತ ಕೆ ಎಸ್ ಆರ್ ಟಿಸಿ ವತಿಯಿಂದ ಸೆಪ್ಟಂಬರ್ 8, 9ರಂದು ರಾಜಧಾನಿ ಬೆಂಗಳೂರಿನಿಂದ ವಿವಿಧ ಜಿಲ್ಲೆ, ತಾಲೂಕುಗಳಿಗೆ ತೆರಳಲು ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

ರಾಜ್ಯದ ವಿವಿಧೆಡೆ ತೆರಳಲು ಪ್ರಯಾಣಿಕರ ಅನುಕೂಲಕ್ಕಾಗಿ 1,000 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಸೆಪ್ಟಂಬರ್ 12ರಂದು ಬೆಂಗಳೂರಿಗೆ ಆಗಮಿಸುವವರಿಗೂ ರಾಜ್ಯದ ವಿವಿಧ ಜಿಲ್ಲಾಕೇಂದ್ರಗಳಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

Home add -Advt

ಬೆಂಗಳೂರಿನಿಂದ ಬೆಳಗಾವಿ, ಬೀದರ್, ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಯಾದಗಿರಿ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಶೃಂಗೇರಿ, ಮಂಗಳೂರು, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

ಗಣೇಶೋತ್ಸವಕ್ಕೆ 5 ದಿನಗಳ ಮಿತಿಗೆ ಬೆಳಗಾವಿ ಮಹಾಮಂಡಳಿಗಳ ಒಕ್ಕೊರಲಿನ ವಿರೋಧ

Related Articles

Back to top button