ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ (ಪಿಎಂಜಿಎಸ್ ವೈ) ನಿರ್ಮಿಸಲಾಗುತ್ತಿರುವ ರಸ್ತೆಗೆ ಅಡೆತಡೆ ಮಾಡದೇ ಸ್ಥಳೀಯವಾಗಿ ರೈತರು ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಸಲಹೆ ನೀಡಿದರು.
ಹುಕ್ಕೇರಿ ತಾಲೂಕಿನ ಉ.ಖಾನಾಪುರ ಗ್ರಾಮಕ್ಕೆ ಸೋಮವಾರ ಭೇಟಿ ನೀಡಿದ ಅವರು ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ ರೈತರೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಪಿಎಂಜಿಎಸ್ ವೈ ಯೋಜನೆಯಡಿ ರಸ್ತೆ ನಿರ್ಮಾಣಕ್ಕೆ ಎಲ್ಲ ರೈತರು ಸಹಕಾರ ನೀಡಬೇಕು. ಅಂದಾಗ ಮಾತ್ರ ಉತ್ತಮ ರಸ್ತೆ ನಿರ್ಮಿಸಲು ಸಾಧ್ಯ. ಜತೆಗೆ ಎಲ್ಲ ರೈತರು ತಮ್ಮಲ್ಲಿ ಸಮಸ್ಯೆ ಬಗೆಹರಿಸಿಕೊಂಡು ರಸ್ತೆ ನಿರ್ಮಾಣಕ್ಕೆ ಸಹಿಯೊಂದಿಗೆ ಪತ್ರ ನೀಡುವಂತೆ ತಿಳಿಸಿದರು.
ಬಳಿಕ ಉ.ಖಾನಾಪುರ ಗ್ರಾಮದಲ್ಲಿ ನಿರ್ಮಿಸಲಾದ ಡಿಜಿಟಲ್ ಗ್ರಂಥಾಲಯಕ್ಕೆ ಭೇಟಿ ನೀಡಿದ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಅಲ್ಲಿನ ವ್ಯವಸ್ಥೆ ನೋಡಿ ಸಂತಸ ವ್ಯಕ್ತಪಡಿಸಿದರು. ಮಕ್ಕಳ ಸ್ಪರ್ಧಾತ್ಮಕ ಪರೀಕ್ಷೆಗೆ ಒತ್ತು ನೀಡುವ ನಿಟ್ಟಿನಲ್ಲಿ ಇನ್ನಷ್ಟು ಪುಸಕ್ತ ಒದಗಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಪಿಎಂಜಿಎಸ್ ವೈ ಇ ಇ ಸುಧಾರಣಿ, ತಾಪಂ ಇಒ ಟಿ.ಆರ್.ಮಲ್ನಾಡದ, ಎಇಇ ಶಶಿಕಾಂತ ವಂದಾಳೆ, ತಾಪಂ ಸಹಾಯಕ ನಿರ್ದೇಶಕ ಲಕ್ಷ್ಮೀನಾರಾಯಣ ಪಿಡಿಒ ವಸಂತ ಬಡಿಗೇರ ಮೊದಲಾವರು ಉಪಸ್ಥಿತರಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ