*ಪದವಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಸರ್ಕಾರಿ, ಅನುದಾನಿತ ಪದವಿ ಕಾಲೇಜುಗಳು ಮತ್ತು ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ. ಪದವಿ ವಿದ್ಯಾರ್ಥಿಗಳಿಗೂ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ. ಬಯೋಮೆಟ್ರಿಕ್ ಹಾಜರಾತಿಯನ್ನು ಪರೀಕ್ಷಾ ವ್ಯವಸ್ಥೆಯೊಂದಿಗೆ ಸಂಯೋಜಿಸುವ ಪ್ರಸ್ತಾವನೆಯನ್ನು ಕೂಡ ಸಿದ್ಧಪಡಿಸಲಾಗಿದೆ. ವಿದ್ಯಾರ್ಥಿಗಳು ಕನಿಷ್ಠ ಶೇಕಡ 75ರಷ್ಟು ಹಾಜರಾತಿ ಹೊಂದಿಲ್ಲದಿದ್ದರೆ ಪರೀಕ್ಷೆಯ ಪ್ರವೇಶ ಪತ್ರ ಸೃಜನೆಯಾಗದಂತೆ ವ್ಯವಸ್ಥೆಯನ್ನು ರೂಪಿಸಲಾಗುತ್ತಿದೆ. ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಯ ಹಾಜರಾತಿ ದಾಖಲಿಸಲು ಈಗಾಗಲೇ ಬಯೋಮೆಟ್ರಿಕ್ … Continue reading *ಪದವಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ*