ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗ್ರಾಮ ಪಂಚಾಯಿತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.
ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿದ್ದು, ಡಿಸೆಂಬರ್ 22 ಹಾಗೂ 27ರಂದು 2 ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ಒಟ್ಟು 5762 ಗ್ರಾಮ ಪಂಚಾಯಿತಿಗಳಿವೆ. ರಾಜ್ಯದಲ್ಲಿ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ.
ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದ್ದು, ಕೋವಿಡ್ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಡಿಸೆಂಬರ್ 30ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ