Belagavi NewsBelgaum NewsKannada NewsKarnataka NewsLatestUncategorized

ಗ್ರಾಮ ಪಂಚಾಯತಿ ಉಪ ಚುನಾವಣೆ: ಅಧಿಸೂಚನೆ ಪ್ರಕಟ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :. ಬೆಳಗಾವಿ ಜಿಲ್ಲೆಗೆ ಸಂಭಂದಿಸಿದಂತೆ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳನ್ನು ಭರ್ತಿ ಮಾಡಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸಾರ್ವತ್ರಿಕ ಚುನಾವಣೆ ಹಾಗೂ ಉಪ ಚುನಾವಣೆ -೨೦೨೩ ರ ಅಧಿಸೂಚನೆಯನ್ನು ಹೊರಡಿಸಿರುತ್ತಾರೆ.
ನಾಮ ಪತ್ರ ಸಲ್ಲಿಸಲು ದಿನಾಂಕ ಜುಲೈ. ೧೨, ೨೦೨೩ ಬುಧವಾರ ಕೊನೆಯ ದಿನವಾಗಿರುತ್ತದೆ. ಗುರುವಾರ (ಜು.೧೩) ನಾಮ ಪತ್ರ ಪರಿಶೀಲಿಸುವ ಕೊನೆಯ ದಿನಾಂಕವಾಗಿರುತ್ತದೆ. ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಜು.೧೫ ಕೊನೆಯ ದಿನಾಂಕವಾಗಿರುತ್ತದೆ ಮತದಾನ ಅವಶ್ಯವಿದ್ದರೆ, ಜುಲೈ.೨೩ ರಂದು ಬೆಳಿಗ್ಗೆ ೭ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಮತದಾನ ನಡೆಸಲಾಗುವುದು.
ಅದೇ ರೀತಿಯಲ್ಲಿ ಮರು ಮತದಾನ ಅವಶ್ಯವಿದ್ದಲ್ಲಿ, ಜುಲೈ.೨೫ ರಂದು ಬೆಳಿಗ್ಗೆ ೭ ಗಂಟೆಯಿಂದ ೫ ಸಂಜೆ ಗಂಟೆಯವರೆಗೆ ಮರು ಮತದಾನ ನಡೆಯಲಿವೆ. ಜು.೨೬ ರಂದು ಬೆಳಿಗ್ಗೆ ೮ ಗಂಟೆಯಿಂದ ಸಂಬಂಧಿತ ತಾಲೂಕಾ ಕೇಂದ್ರಗಳಲ್ಲಿ ಮತಗಳ ಎಣಿಕೆ ಪ್ರಕ್ರಿಯೆ ನಡೆಸಲಾಗುವುದು.
ಸಾರ್ವತ್ರಿಕ ಚುನಾವಣೆ:
ರಾಯಬಾಗ ತಾಲೂಕಿನ ಮಂಟೂರು ಗ್ರಾಮ ಪಂಚಾಯತಿಯ ವಾರ್ಡ್ ನಂ ೧ ರಲ್ಲಿ ೪ ಸದಸ್ಯ ಸ್ಥಾನಗಳು, ಮಂಟೂರು ವಾರ್ಡ್ ನಂ ೨ ರಲ್ಲಿ ೩ ಸದಸ್ಯರ ಸ್ಥಾನ ಹಾಗೂ ಮಂಟೂರು ವಾರ್ಡ್ ೩ ರಲ್ಲಿ ೩ ಸೇರಿದಂತೆ ಒಟ್ಟು ೧೦ ಸದಸ್ಯ ಸ್ಥಾನಗಳಿಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ.
ಉಪ ಚುನಾವಣೆ:
ನಿಪ್ಪಾಣಿ ತಾಲೂಕಿನ ಸೌಂದಲಗಾ ಗ್ರಾಮ ಪಂಚಾಯತಿಯ ವಾರ್ಡ್ ೫ ರಲ್ಲಿ ೧ ಸದಸ್ಯ ಸ್ಥಾನ, ನಿಪ್ಪಾಣಿ ತಾಲೂಕಿನ ಸೌಂದಲಗಾ ಗ್ರಾಮ ಪಂಚಾಯತಿಯ ವಾರ್ಡ್ ನಂ ೬ ರಲ್ಲಿ ೧ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ.
ಚಿಕ್ಕೋಡಿ ತಾಲೂಕಿನ ವಡ್ರಾಳ ಗ್ರಾಮ ಪಂಚಾಯತಿಯ ವಾರ್ಡ್ ನಂ ೨ ರಲ್ಲಿ ೧ ಸದಸ್ಯರ ಸ್ಥಾನ, ಮೂಡಲಗಿ ತಾಲೂಕಿನ ಯಾದವಾಡ ಗ್ರಾಮ ಪಂಚಾಯತಿಯ ವಾರ್ಡ್ ನಂ ೩ ರಲ್ಲಿ ೧ ಸದಸ್ಯರ ಸ್ಥಾನ, ಹುಕ್ಕೇರಿ ತಾಲೂಕಿನ ಯಾದಗೂಡ ಗ್ರಾಮ ಪಂಚಾಯತಿಯ ವಾರ್ಡ್ ೩ ರಲ್ಲಿ ೧, ಹುಕ್ಕೇರಿ ತಾಲೂಕಿನ ಕರಗುಪ್ಪಿ ಗ್ರಾಮ ಪಂಚಾಯತಿಯ ವಾರ್ಡ್ ೪ ರಲ್ಲಿ ೧ ಹಾಗೂ ಹುಕ್ಕೇರಿ ತಾಲೂಕಿನ ಕರಗುಪ್ಪಿ ಗ್ರಾಮ ಪಂಚಾಯತಿಯ ವಾರ್ಡ್ ನಂ ೫ ರಲ್ಲಿ ೧ ಸದಸ್ಯರ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ.
ರಾಯಬಾಗ ತಾಲೂಕಿನ ರಾಯಬಾಗ ಗ್ರಾಮಿಣ ಗ್ರಾಮ ಪಂಚಾಯತಿಯ ವಾರ್ಡ್ ೬ ರಲ್ಲಿ ೧ ಸದಸ್ಯರ ಸ್ಥಾನ, ಗೋಕಾಕ್ ತಾಲೂಕಿನ ನಂದಗಾಂವ ಗ್ರಾಮ ಪಂಚಾಯತಿಯ ವಾರ್ಡ್ ನಂ ೩ ರಲ್ಲಿ ೧, ಬೈಲಹೊಂಗಲ ತಾಲೂಕಿನ ಸಂಪಗಾಂವ ಗ್ರಾಮ ಪಂಚಾಯತಿಯ ವಾರ್ಡ್ ನಂ ೫ ರಲ್ಲಿ ೧, ಬೈಲಹೊಂಗಲ ತಾಲೂಕಿನ ಕಡೋಲಿ ಗ್ರಾಮ ಪಂಚಾಯತಿಯ ವಾರ್ಡ್ ನಂ ೧ ರಲ್ಲಿ ೧, ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮ ಪಂಚಾಯತಿಯ ವಾರ್ಡ್ ನಂ ೮ ರಲ್ಲಿ ೧, ಬೆಳಗಾವಿ ತಾಲೂಕಿನ ಧಾಮಣಿ ಎಸ್ ಗ್ರಾಮ ಪಂಚಾಯತಿಯ ವಾರ್ಡ್ ನಂ ೫ ರಲ್ಲಿ ೧ ಹಾಗೂ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮ ಪಂಚಾಯತಿಯ ವಾರ್ಡ್ ನಂ ೨ ರಲ್ಲಿ ೧ ಸದಸ್ಯರ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button