Latest

ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಾಂಕ ಪ್ರಕಟ ಸಾಧ್ಯತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಗೆ ಇಂದು ರಾಜ್ಯ ಚುನಾವಣಾ ಆಯೋಗ ದಿನಾಂಕ ಘೋಷಿಸುವ ಸಾಧ್ಯತೆಯಿದೆ.

ಬೆಳಿಗ್ಗೆ 11:30 ಕ್ಕೆ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದ್ದು, ಈ ವೇಳೆ ಚುನಾವಣಾ ದಿನಾಂಕ ಪ್ರಕಟವಾಗಲಿದೆ. 3-4 ಹಂತಗಳಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದೆ.

ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಮೂರು ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶುಕ್ರವಾರ ಹೈಕೋರ್ಟ್‌ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಚುನಾವಣಾ ದಿನಾಂಕ ಪ್ರಕಟಿಸುವ ಸಾಧ್ಯತೆಯಿದೆ.

Home add -Advt

Related Articles

Back to top button