Belagavi NewsBelgaum NewsCrimeLatest

*ಸುಟ್ಟು ಭಸ್ಮವಾದ ಗ್ರಾಪಂ ಕಚೇರಿ: ಶಾರ್ಟ್ ಸರ್ಕ್ಯೂಟ್ ಶಂಕೆ*

ಪ್ರಗತಿವಾಹಿನಿ ಸುದ್ದಿ,ಬೆಳಗಾವಿ: ಶಾರ್ಟ್ ಸರ್ಕ್ಯೂಟ್‌ನಿಂದ ಖಾನಾಪುರ ತಾಲೂಕಿನ ಹಿರೇಮುನ್ನವಳ್ಳಿಯ ಗ್ರಾಮ ಪಂಚಾಯತಿ ಕಚೇರಿ ಹೊತ್ತಿ ಉರಿದಿದ್ದು ಕಂಪ್ಯೂಟರ್, ದಾಖಲೆಗಳು ಹಾಗೂ ಇತರೆ ಉಪಕರಣಗಳು ಸುಟ್ಟು ಭಸ್ಮವಾಗಿವೆ.

ಈ ಘಟನೆಯಲ್ಲಿ 5 ಲಕ್ಷಕ್ಕೂ ಅಧಿಕ ಮೊತ್ತದ ನಷ್ಟವಾಗಿದೆ ಎಂದು ಅಂದಾಜು ಎನ್ನಲಾಗಿದೆ. ರಾತ್ರಿ ಘಟನೆ ನಡೆದಿದ್ದು, ಬೆಳಗ್ಗೆ ಸಿಬ್ಬಂದಿ ಕಚೇರಿಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. 

ಘಟನಾ ಸ್ಥಳಕ್ಕೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಮೈತ್ರಿ ಹಾಗೂ ಗ್ರಾಮ ಪಂಚಾಯಿತಿ ಪಿಡಿಒ ವೀರೇಶ್ ಸಜ್ಜನ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಿರೇಮುನ್ನವಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಿಂದ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ನೀಡಲಾಗುತ್ತಿತ್ತು. ಹಳೆಯ ಕಟ್ಟಡವಾಗಿರುವ ಹಿನ್ನೆಲೆಯಲ್ಲಿ ವಿದ್ಯುತ್ ವ್ಯವಸ್ಥೆಯಲ್ಲಿ ದೋಷ ಉಂಟಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿರಬಹುದು ಎಂಬ ಪ್ರಾಥಮಿಕವಾಗಿ ಅಂದಾಜಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button