Latest

ರಸ್ತೆ ಅಪಘಾತದಲ್ಲಿ ಗ್ರಾಪಂ ಸದಸ್ಯ ಸಾವು; ಮೂವರಿಗೆ ಗಂಭೀರ ಗಾಯ

ಪ್ರಗತಿವಾಹಿನಿ ಸುದ್ದಿ, ಮೈಸೂರು : ಇಲ್ಲಿನ ಹುಣಸೂರು-ಮೈಸೂರು ಹೆದ್ದಾರಿಯ ಬನ್ನಿಕುಪ್ಪೆ ಬಳಿ ಸಾರಿಗೆ ಸಂಸ್ಥೆ ಬಸ್ ಮತ್ತು ಸ್ವಿಫ್ಟ್ ಕಾರಿನ ಮಧ್ಯೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಸಾವಿಗೀಡಾಗಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ.

ಹುಣಸೂರು ತಾಲೂಕಿನ ನಿಲುವಾಗಿಲು ಗ್ರಾಪಂ ಸದಸ್ಯ ಭಾಸ್ಕರ್ (42) ಮೃತಪಟ್ಟವರು. ಪತ್ನಿ ರಮ್ಯಾ, ತಾಯಿ ಸಾವಿತ್ರಮ್ಮ, ಪುತ್ರ ಚರಿತ್ ಗಾಯಗೊಂಡಿದ್ದು, ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಭಾಸ್ಕರ್ ಅವರು ಕುಟುಂಬದ ಸದಸ್ಯರೊಂದಿಗೆ ಕಾರಿನಲ್ಲಿ ತಾಲೂಕಿನ ಮನುಗನಹಳ್ಳಿಯಲ್ಲಿರುವ ತಮ್ಮ ಮಾವನ ಮನೆಗೆ ಹೋಗಿ ಮರಳುತ್ತಿದ್ದಾಗ ಹೆದ್ದಾರಿಯ ಬನ್ನಿಕುಪ್ಪೆ ಬಳಿ ಪಿರಿಯಾಪಟ್ಟಣ ಡಿಪೋಗೆ ಸೇರಿದ ಬಸ್ ಕಾರಿಗೆ ಡಿಕ್ಕಿ ಹೊಡೆದುಈ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಭಾಸ್ಕರ್ ಸ್ಥಳದಲ್ಲೇ ಮೃತಪಟ್ಟರು. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಿಳಿಕೆರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related Articles

Back to top button