Karnataka News

*ಲೈಂಗಿಕ ಕಿರುಕುಳ, ಜಾತಿ ನಿಂದನೆ: ಗ್ರಾಮ ಪಂಚಾಯತ್ ಸದಸ್ಯ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಲೈಂಗಿಕ ಕಿರುಕುಳ ನೀಡಿ, ಜಾತಿ ನಿಂದನೆ ಮಾಡುತ್ತಿದ್ದ ಗ್ರಾಮ ಪಂಚಾಯತ್ ಸದಸ್ಯರೂಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಚಿತ್ರದುರ್ಗದ ಸಿರಿಗೆರೆಯಲ್ಲಿ ನಡೆದಿದೆ.

ಸಿರಿಗೆರೆ ಗ್ರಾಮ ಪಂಚಾಯಿತಿ ಸದಸ್ಯ ದೇವರಾಜ್ ಬಂಧಿತ ಆರೋಪಿ. ಗ್ರಾಮ ಪಂಚಾಯಿತಿ ಸದಸ್ಯ ದೇವರಾಜ್, ಜಾತಿ ನಿಂದನೆ ಮಾಡುತ್ತಿದ್ದರು. ಅಲ್ಲದೇ ಗ್ರಾಮ ಪಂಚಾಯತ್ ಅಧ್ಯಕ್ಷಗೆ, ಪಿಡಿಓ ಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು.

ಪಂಚಾಯತಿ ಕ್ಲರ್ಕ್ ನೀಡಿದ ದೂರಿನ ಹಿನ್ನೆಲೆಯಲ್ಲಿ ದೇವರಾಜ್ ನನ್ನು ಪೊಲಿಸರು ಬಂಧಿಸಿದ್ದಾರೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button