ಪ್ರಗತಿವಾಹಿನಿ ಸುದ್ದಿ: ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಐದಬಾವಿಯಲ್ಲಿ ನಡೆದಿದೆ.
ದ್ಯಾಮಪ್ಪ ಪೂಜಾರಿ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ದ್ಯಾಮಪ್ಪ ಪೂಜಾರಿ ದೇವರಭೂಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದರು. ಪ್ರಭಾವಿಗಳಿಂದ ರಾಜೀನಾಮೆಗೆ ಒತ್ತಡ ಹಾಕಿದ ಹಿನ್ನೆಲೆಯಲ್ಲಿ ರಾಜೀನಾಮೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ದ್ಯಾಮಪ್ಪ ಪೂಜಾರಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕೇವಲ 15 ತಿಂಗಳಾಗಿತ್ತು. ಅಧಿಕಾರಾವದಿ ಇನ್ನೂ ಬಾಕಿ ಇರುವಾಗಲೇ ರಾಜೀನಾಮೆ ಕೊಡುವಂತೆ ಒತ್ತಡ ಹಾಕುತ್ತಿದ್ದರು. ಬಲವಂತದಿಂದ ರಾಜೀನಾಮೆ ಪಡೆದುಕೊಂಡಿದ್ದು, ಮನನೊಂದ ದ್ಯಾಮಪ್ಪ ಪೂಜಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ