ಪ್ರಗತಿವಾಹಿನಿ ಸುದ್ದಿ; ಹಾಸನ: ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಟ್ಟಿದ್ದ ನಿವೇಶನವನ್ನು ಖಾಸಗಿ ವ್ಯಕ್ತಿಗಳಿಗೆ ನೀಡಿದ ಆರೋಪದಲ್ಲಿ ಮೂವರು ಪಿಡಿಓಗಳನ್ನು ಅಮಾನತುಗೊಳಿಸಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಳದರೆಯಲ್ಲಿ ನಡೆದಿದೆ.
ಬಳದರೆ ಗ್ರಾಮ ಪಂಚಾಯತ್ ನ ಪಿಡಿಓ ಸಿ.ಎನ್.ನವೀನ್ ಕೆಂಬಾಳು, ಬಾಗೂರು ಪಿಡಿಓ ಕೃಷ್ಣೇಗೌಡ, ಡಿಂದಗೂರು ಪಿಡಿಓ ರಾಮಸ್ವಾಮಿ ಅಮಾನತುಗೊಂಡವರು.
ಮೂವರು ಪಿಡಿಓಗಳು ಸಾರ್ವಜನಿಕರ ಉದ್ದೇಶಕ್ಕಾಗಿ ಮೀಸಲಿಟ್ಟ 18ಎ ನಿವೇಶನವನ್ನು ಖಾಸಗಿ ವ್ಯಕ್ತಿಗಳಿಗೆ ಮಾಡಿಕೊಟ್ಟಿದ್ದರು. ಈ ಬಗ್ಗೆ ದೂರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಪೂರ್ಣಿಮಾ ಮೂವರು ಪಿಡಿಓಗಳನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ