Belagavi NewsBelgaum NewsKannada NewsKarnataka NewsLatest
*15 ವರ್ಷದ ಬಾಲಕಿಯನ್ನು ವಿವಾಹವಾಗಿರುವ ಗ್ರಾಮ ಪಂಚಾಯತ್ ಅಧ್ಯಕ್ಷನ ವಿರುದ್ಧ FIR ದಾಖಲು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಗ್ರಾಮ ಪಂಚಾಯತ್ ಅಧ್ಯಕ್ಷ 15 ವರ್ಷದ ಬಾಲಕಿಯನ್ನು ಮದುವೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆತನ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಹುಕ್ಕೇರಿ ತಾಲೂಕಿನ ಬಸಾಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಭೀಮಶಿ ಕಾಲಿಮಣಿ ಅಪ್ರಾಪ್ತೆಯನ್ನು ವಿವಾಹವಾಗಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಮೂಲಕ ಈಗಾಗಲೇ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಕಾನೂನು ಕ್ರಮ ಮುಂದುವರಿಯಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ನೀಡಿದ್ದಾರೆ.