Belagavi NewsBelgaum NewsKannada NewsKarnataka NewsPolitics

*ಬೆಳಗಾವಿಗೆ ಆಗಮಿಸಿದ ಕಿತ್ತೂರು ರಾಣಿ ಚನ್ನಮ್ಮನ ವೀರಜ್ಯೋತಿಗೆ ಅದ್ಧೂರಿ ಸ್ವಾಗತ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಿತ್ತೂರು ರಾಣಿ ಚನ್ನಮ್ಮನ ವಿಜಯದ ಸಂಕೇತವಾಗಿರುವ ವೀರಜ್ಯೋತಿ ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸಿದ್ದು, ನಗರದ ಚನ್ನಮ್ಮ ವೃತ್ತದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಬೆಳಗಾವಿ ಮಹಾನಗರ ಪಾಲಿಕೆಯ ಉಪಮೇಯರ್ ಹನಮಂತ ಕೊಂಗಾಲಿ ಅವರು ಚನ್ನಮ್ಮನ ವೀರಜ್ಯೋತಿಯನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರ ಅಶೋಕ ಚಂದರಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಚನ್ನಮ್ಮನ ವೀರಜ್ಯೋತಿ ಎರಡು ದಿನಗಳ ಕಾಲ ಬೆಳಗಾವಿ ನಗರದಲ್ಲಿ ಸಂಚರಿಸಲಿದೆ. ಬಳಿಕ ಐತಿಹಾಸಿಕ ಕಿತ್ತೂರಿಗೆ ತೆರಳಲಿದ್ದು, ಕಿತ್ತೂರು ಉತ್ಸವದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಲಿದೆ.

ವೀರಜ್ಯೋತಿಯ ಆಗಮನದಿಂದ ಬೆಳಗಾವಿಯಲ್ಲಿ ಕಿತ್ತೂರು ರಾಣಿ ಚನ್ನಮ್ಮನ ಶೌರ್ಯ, ಸಾಹಸ ಹಾಗೂ ಸ್ವಾತಂತ್ರ್ಯ ಹೋರಾಟದ ಸ್ಮರಣೆ ಮತ್ತೊಮ್ಮೆ ಅನುರಣಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button