CrimeKannada NewsKarnataka NewsNational

*ಸಿಡಿಲಿನ ಆರ್ಭಟಕ್ಕೆ ಅಜ್ಜಿ–ಮೊಮ್ಮಗ ಬಲಿ; ಮೂವರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ: ಸಿಡಿಲು ಬಡಿದು ಅಜ್ಜಿ ಹಾಗೂ ಮೊಮ್ಮಗ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಮೃತರನ್ನು ರಾಮವ್ವ (60) ಹಾಗೂ ಅವರ ಮೊಮ್ಮಗ ಬರಮಪ್ಪ ಖಂಡೇಕರ್ (23) ಎಂದು ಗುರುತಿಸಲಾಗಿದೆ. ಹೊಲದಲ್ಲಿ ಬೆಳೆದ ಬೆಳೆಯ ರಾಶಿ ಮಾಡುವ ಕೆಲಸದಲ್ಲಿ ತೊಡಗಿದ್ದ ವೇಳೆ ಏಕಾಏಕಿ ಮಳೆ ಆರಂಭವಾಗಿದೆ. ಮಳೆಯಿಂದ ರಕ್ಷಣೆ ಪಡೆಯಲು ಅಜ್ಜಿ, ಮೊಮ್ಮಗ ಸೇರಿದಂತೆ ಕೆಲವರು ಮರದ ಕೆಳಗೆ ಆಶ್ರಯ ಪಡೆದಿದ್ದರು. ಇದೇ ವೇಳೆ ಏಕಾಏಕಿ ಸಿಡಿಲು ಬಡಿದ ಪರಿಣಾಮ ರಾಮವ್ವ ಹಾಗೂ ಬರಮಪ್ಪ ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಐಹೊಳೆ ಗ್ರಾಮದಲ್ಲಿ ನಡೆದಿದೆ.

ಘಟನೆಯ ವೇಳೆ ಮರದ ಕೆಳಗೆ ನಿಂತಿದ್ದ ಇನ್ನೂ ಮೂವರು ಗಾಯಗೊಂಡಿದ್ದು, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಅಮೀನಗಢ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಳೆಯಿಂದ ಸಂಭವಿಸಿದ ದುರಂತಕ್ಕೆ ಗ್ರಾಮದಲ್ಲಿ ಆಘಾತದ ವಾತಾವರಣ ನಿರ್ಮಾಣವಾಗಿದೆ.

Related Articles

Back to top button