*ಗ್ರ್ಯಾನೈಟ್ ಗಣಿಯಲ್ಲಿ ಸ್ಫೋಟ: ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವು; ಇನ್ನೋರ್ವನ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಗ್ರ್ಯಾನೈಟ್ ಗಣಿಯಲ್ಲಿ ಸಿಡಿಮದ್ದು ಸ್ಫೋಟಗೊಂಡು ಓರ್ವ ಕಾರ್ಮಿಕ ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಮಾಕಾಪುರದಲ್ಲಿ ನಡೆದಿದೆ. ಬಾಗಲಕೋಟೆ ಮೂಲದ ವೆಂಕಟೇಶ್ ಮೃತ ಕಾರ್ಮಿಕ. ಇನ್ನೋರ್ವನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅನುಮತಿ ಇಲ್ಲದೇ ಅಕ್ರಮವಾಗಿ ಗ್ರ್ಯಾನೈಟ್ ಗಣಿ ಉದ್ಯಮ ನಡೆಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. *ಬಾಲಕನನ್ನು ಮರಕ್ಕೆ ಕಟ್ಟಿಹಾಕಿ ಮರ್ಮಾಂಗಕ್ಕೆ … Continue reading *ಗ್ರ್ಯಾನೈಟ್ ಗಣಿಯಲ್ಲಿ ಸ್ಫೋಟ: ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವು; ಇನ್ನೋರ್ವನ ಸ್ಥಿತಿ ಗಂಭೀರ*