ಪ್ರಗತಿವಾಹಿನಿ ಸುದ್ದಿ; ಭಾರತದ ಪ್ರಜಾಪ್ರಭುತ್ವವು ವಿಶ್ವದ ಬೃಹತ್ ಹಾಗೂ ಶ್ರೇಷ್ಠ ಗಣತಂತ್ರವೆನಿಸಿದೆ.
ನೂರಾ ನಲವತ್ತು ಕೋಟಿ ಜನತೆ ಸಾಂವಿಧಾನಿಕವಾಗಿ ತಮ್ಮ ಹಕ್ಕುಗಳನ್ನು ಪಡೆಯುವ ಮೂಲಕ ಭವ್ಯ ಭಾರತ ನಿರ್ಮಾಣಕ್ಕೆ ಕಾರಣೀಭೂತರಾಗಿದ್ದಾರೆ.
ಇಂತಹ ಸಂವಿಧಾನವನ್ನು ರಚಿಸಿದ ಹಿಂದಿನ ಎಲ್ಲ ರಾಷ್ಟ್ರ ನಾಯಕರನ್ನು ಸ್ಮರಿಸಬೇಕೆಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆಯವರು ಹೇಳಿದರು.
ಅವರು ಕೆಎಲ್‌ಇ ಪ್ರಧಾನ ಕಚೇರಿಯಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.
ಭಾರತದ ಸ್ವಾತಂತ್ರ ನಂತರ ೨೬, ಜನವರಿ ೧೯೫೦ರಂದು ಜಾರಿಗೆ ಬಂದ ನಮ್ಮ ಸಂವಿಧಾನದ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಪ್ರತಿಯೊಬ್ಬ ಭಾರತೀಯನೂ ಸಂವಿಧಾನವನ್ನು ಅರ್ಥೈಸಿಕೊಳ್ಳಬೇಕು. ಅದನ್ನು ಗೌರವಿಸಬೇಕು.
ಜಾತ್ಯಾತೀತ ಮೌಲ್ಯಗಳನ್ನು ಎತ್ತಿಹಿಡಿದಿರುವ ಸಂವಿಧಾನ ನಮ್ಮೆಲ್ಲರಿಗೂ ಮತದಾನ ಅಧಿಕಾರವನ್ನು ಕಲ್ಪಿಸಿದೆ. ಅದನ್ನ ಅನುಷ್ಠಾನಗೊಳಿಸುವ ಮೂಲಕ ಸರಿಯಾದ ಜನಪ್ರತಿನಿಧಿಯನ್ನು ಆಯ್ಕೆ ಮಾಡಬೇಕು.
ಭಾರತವು ಇಂದು ಎಲ್ಲ ಕ್ಷೇತ್ರಗಳಲ್ಲಿ ವಿಕಸಿಸುತ್ತಿದೆ. ಶ್ರೇಷ್ಠ ಪ್ರಧಾನಿಮಂತ್ರಿಗಳ ಧಣಿವರಿಯದ ಪರಿಶ್ರಮದ ಫಲವಾಗಿ ಜಾಗತಿಕವಾಗಿ ಗುರುತಿಸುವಂತಾಗಿದೆ. ಭವಿಷ್ಯತ್ತಿನಲ್ಲಿ ಭಾರತವು ಇನ್ನಷ್ಟು ಸಾಧನೆಗೈಯಲೆಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕೆಎಲ್‌ಇ ಆಡಳಿತ ಮಂಡಳಿಯ ಆಜೀವ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ