*ಗ್ರೇಟರ್ ಬೆಂಗಳೂರು ವಿಧೇಯಕ ವಾಪಸ್*
ಪ್ರಗತಿವಾಹಿನಿ ಸುದ್ದಿ: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಅಂಇತ ಹಾಕದೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ. ಗ್ರೇಟರ್ ಬೆಂಗಳೂರು ವಿಧೇಯಕದ ಬಗ್ಗೆ ಕೆಲ ಸ್ಪಷ್ಟನೆಯನ್ನು ಕೇಳಿರುವ ರಾಜ್ಯಪಾಲರು ಮಸೂದೆಯನ್ನು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ಈ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ ನೀಡಿದ್ದು, ಗ್ರೇಟರ್ ಬೆಂಗಳೂರು ವಿಧೇಯಕವನ್ನು ರಾಜ್ಯಪಾಲರು ಕೆಲ ಸ್ಪಷ್ಟನೆಗಳನ್ನು ಕೇಳಿ ವಾಪಸ್ ಕಳುಹಿಸಿದ್ದಾರೆ. ಸ್ಪಷ್ಟನೆಗಳೊಂದಿಗೆ ಮಸೂದೆಯನ್ನು ಮತ್ತೆ ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.
Copy and paste this URL into your WordPress site to embed
Copy and paste this code into your site to embed