
ಪ್ರಗತಿವಾಹಿನಿ ಸುದ್ದಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ-ಬಿಜಿಎ ಪದನಿಮಿತ್ತ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜಿಎ ಉಪಾಧ್ಯಕ್ಷರಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಕೇಂದ್ರದಲ್ಲಿರುವ ಬೆಂಗಳೂರು ಸಚಿವರು, ರಾಜ್ಯ ಸರ್ಕಾರದ ಬೆಂಗಳೂರು ಸಚಿವರು, ಬೆಂಗಳೂರು ಸಂಸದರು, ಶಾಸಕರು, ಎಂಎಲ್ ಎ ಗಳು ಪದನಿಮಿತ್ತ ಸದಸ್ಯರಾಗಿದ್ದಾರೆ.
ಇನ್ನು ಸದಸ್ಯರಾಗಿ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೂ ಸ್ಥಾನ ನೀಡಲಾಗಿದೆ. ಬಿಜಿಎ ಮುಖ್ಯ ಆಯುಕ್ತರು ಪದನಿಮಿತ್ತ ಸದಸ್ಯರ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಒಟ್ಟು 75 ಜನರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




