
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಬೆಂಗಳೂರು ಆಡಳಿತ ವಿಕೇಂದ್ರೀಕರಣಕ್ಕಾಗಿ ಐದು ಪಾಲಿಕೆಗಳನ್ನು ರಚನೆ ಮಾಡಿ ಆದೇಶ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024ರ ಅಡಿಯಲ್ಲಿ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆ, ಬೆಂಗಳೂರು ಉತ್ತರ ಮಹಾನಗರ ಪಾಲಿಕೆ, ಬೆಂಗಳೂರು ಕೇಂದ್ರ ಮಹಾನಗರ ಪಾಲಿಕೆ, ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆ ಹಾಗೂ ಬೆಂಗಳೂರು ಪೂರ್ವ ಮಹಾನಗರ ಪಾಲಿಕೆ ಎಂದು ಐದು ಪಾಲಿಕೆಗಳನ್ನು ರಚನೆ ಮಾಡಿದೆ.
ಆಗಸ್ಟ್ 10ರೊಳಗೆ ಬೆಂಗಳೂರು ಮಹಾನಗರ ಪಾಲಿಕೆ ಕಚೇರಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕೇಂದ್ರ ಕಚೇರಿಯಾಗಿ ಮಾರ್ಪಾಡುಗೊಳ್ಳಲಿದೆ. ಆಗಸ್ಟ್.11ರಿಂದ ಆರಂಭವಾಗಲಿರುವ ಮುಂಗಾರು ಅಧಿವೇಶನದಲ್ಲಿ ಐದು ಪಾಲಿಕೆಗಳನ್ನು ರಚನೆ ಮಾಡಿದ ವಿಚಾರ ಚರ್ಚಿಸಿ ಬಿಲ್ ಪಾಸ್ ಮಾಡಲು ಸರ್ಕಾರ ನಿರ್ಧರಿಸಿದೆ.