Kannada NewsKarnataka NewsLatest

ಜನರ ಪ್ರತಿಭಟನೆಗೆ ಮಣಿದ ಸರಕಾರ: ದಂಡದ ಪ್ರಮಾಣ ಭಾರಿ ಇಳಿಕೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು  – ಮಾಸ್ಕ್ ಧರಿಸದಿದ್ದರೆ ವಿಧಿಸಲು ಉದ್ದೇಶಿಸಿದ್ದ ದಂಡದ ಪ್ರಮಾಣವನ್ನು ಕಡಿಮೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಮಾಸ್ಕ್ ಧರಿಸದಿದ್ದರೆ ನಗರ ಪ್ರದೇಶದಲ್ಲಿ 1000 ರೂ. ಮತ್ತು ಗ್ರಾಮೀಣ ಪ್ರದೇಶದಲ್ಲಿ 500 ರೂ. ದಂಡ ವಿಧಿಸಲು ಸರಕಾರ ನಿರ್ಧರಿಸಿತ್ತು.

Home add -Advt

ಆದರೆ ಸಾರ್ವಜನಿಕರಿಂದ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕೂಡ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಇದೀಗ ನಗರ ಪ್ರದೇಶದಲ್ಲಿ 250 ರೂ. ಮತ್ತು ಗ್ರಾಮೀಣ ಪ್ರದೇಶದಲ್ಲಿ 100 ರೂ. ದಂಡದ ಪ್ರಮಾಣ ನಿಗದಿಪಡಿಸಿ ಸರಕಾರ ಆದೇಶ ಹೊರಡಿಸಿದೆ.

ಈ ಸುದ್ದಿಗಳನ್ನು ಓದಿ –

ಮಾಸ್ಕ್ ಹಾಕದೇ ಹೊರಗೆ ಹೋದರೆ ದಂಡ ಎಷ್ಟು ಗೊತ್ತಾ?; ಹೊಸ ರೂಲ್ಸ್ ಕೇಳಿದ್ರೆ ಶಾಕ್ ಆಗ್ತೀರಾ

ಬೆಳಗಾವಿಯಲ್ಲಿ ಬುಧವಾರದಿಂದ 1000 ರೂ. ದಂಡ

Related Articles

Back to top button