
ಪ್ರಗತಿವಾಹಿನಿ ಸುದ್ದಿ: ಗೃಹ ಲಕ್ಷ್ಮೀ ಯೋಜನೆ ಹಣ ಕೂಡಿಸಿ ಮಹಿಳೆ ಬಟ್ಟೆ ವ್ಯಾಪಾರ ಪ್ರಾರಂಭಿಸಿ ಜೀವನ ಕಟ್ಟಿಕೊಂಡಿದ್ದಾಳೆ. ಈ ಬಗ್ಗೆ ಮಹಿಳೆ ವಿಡಿಯೋ ಹಂಚಿಕೊಂಡಿದ್ದಾಳೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ನಿವಾಸಿ ಆಶಾ ತಳವಾರ ಎಂಬ ಫಲಾನುಭವಿ ಮಹಿಳೆಯು ವಿಡಿಯೋ ಬಿಡುಗಡೆಗೊಳಿಸಿ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆ ಕೊಂಡಾಡಿದ್ದಾಳೆ.
ಪ್ರತಿ ತಿಂಗಳು ಗೃಹಲಕ್ಷ್ಮೀ ಹಣ ಕೂಡಿಸಿ 20ಸಾವಿರ ರೂಪಾಯಿ ಮೌಲ್ಯದ ಬಟ್ಟೆ ತಂದು ಮನೆಯಲ್ಲಿಯೇ ಬಟ್ಟೆ ವ್ಯಾಪಾರ ಪ್ರಾರಂಭಿಸಿದ್ದು ಸಾಕಷ್ಟು ಅನುಕೂಲವಾಗಿದೆ. ಟೈಲರ್ ಕೆಲಸದ ಜತೆಗೆ ಬಟ್ಟೆ ವ್ಯಾಪಾರವನ್ನೂ ಪ್ರಾರಂಭ ಮಾಡಿದ್ದೇನೆ ಎಂದು ಖುಷಿ ವ್ಯಕ್ತ ಪಡಿಸಿದ್ದಾಳೆ.
ಅರಭಾವಿ ವಿಧಾನಸಭಾ ಕ್ಷೇತ್ರದ ಮೂಡಲಗಿ ಪಟ್ಟಣದ ನಿವಾಸಿ ಆಶಾ ತಳವಾರ ಎಂಬ ಮಹಿಳೆ ಗೃಹಲಕ್ಷ್ಮಿ ಯೋಜನೆಯ ಹಣ ಕೂಡಿಟ್ಟು ಬಟ್ಟೆ ವ್ಯಾಪಾರದಲ್ಲಿ ತೊಡಗಿಸಿಕೊಂಡು, ಬದುಕು ಕಟ್ಟಿಕೊಂಡಿರುವುದನ್ನು ಕೇಳಿ, ಖುಷಿಯಾಯಿತು. ಗೃಹಲಕ್ಷ್ಮೀ ಯೋಜನೆ ಇಂದು ಲಕ್ಷಾಂತರ ಮಹಿಳೆಯರ ಕನಸುಗಳನ್ನು ಸಾಕಾರಗೊಳಿಸಿ, ನೆಮ್ಮದಿಯ ಜೀವನ ನಡೆಸಲು ದಾರಿ ಮಾಡಿಕೊಟ್ಟಿದೆ. ನಿಮ್ಮ ಜೀವನದಲ್ಲೂ ಗೃಹಲಕ್ಷ್ಮಿ ಯೋಜನೆಯಿಂದಾದ ಪ್ರಯೋಜನವನ್ನು ನಮ್ಮೊಂದಿಗೆ ಹಂಚಿಕೊಳ್ಳಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ