Belagavi NewsBelgaum NewsKannada NewsKarnataka NewsPolitics

*ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ App ಜಾರಿಗೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದ ಮಹಿಳೆಯರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಅಭಿವೃದ್ಧಿಗೊಳಿಸಲು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ, ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿರುವ ಮಹಿಳಾ ಉದ್ಯಮಿದಾರರಿಗಾಗಿ ಗೃಹಲಕ್ಷ್ಮೀ ಡಿಜಿಟಲ್ ವೇದಿಕೆಯ ಸೌಲಭ್ಯ ಕಲ್ಪಿಸಲಾಗಿದ್ದು, 09-01-2026 ರಂದು ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ App ಅನ್ನು ಲಾಂಚ್ ಮಾಡಲಾಗಿರುತ್ತದೆ.

ಮಹಿಳಾ ಉದ್ಯಮಿಗಳ ನೋಂದಣಿ ಕಾರ್ಯ ಕೈಗೊಳ್ಳಲು ಸ್ತ್ರೀ ಶಕ್ತಿ ಸ್ವ ಸಹಾಯ ಗುಂಪಿನ ಸದಸ್ಯರು NRLM ಫಲಾನುಭವಿಗಳು NRLM ಉದ್ಯಮಿಗಳು, ಅಕ್ಕ ಕೆಫೆ ಘಟಕಗಳನ್ನು ನಿರ್ವಹಿಸುತ್ತಿರುವ ಮಹಿಳೆಯರು Karnataka small scale Industries Association (KASSIA) ಘಟಕಗಳ ಮಹಿಳಾ ಉದ್ಯಮಿಗಳು RUDSETI/RSETI (ಧರ್ಮಸ್ಥಳ) ಮೂಲಕ ತರಬೇತಿ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಮಹಿಳೆಯರು ನಿಗಮದಿಂದ ವಿವಿಧ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆದ ಮಹಿಳಾ ಫಲಾನುಭವಿಗಳು ಜಿಲ್ಲಾ ತಾಲೂಕು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇತರೆ ಯಶಸ್ವಿ ಮಹಿಳಾ ಉದ್ಯಮಿಗಳು ತಾವು ತಯಾರಿಸುವ ಉತ್ಪನ್ನಗಳ ಮಾಹಿತಿಯನ್ನು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಅಭಿವೃದ್ಧಿ ನಿಗಮ ಅಭಿವೃದ್ಧಿ ನಿರೀಕ್ಷಕ (0831-2407235) ರನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

Related Articles

Back to top button