Kannada NewsKarnataka NewsLatest
ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ಕಾರ್ಯಕ್ರಮದ ಸಿದ್ಧತೆ: ಗುರುವಾರ ಡಿಸಿಎಂ ಪರಿಶೀಲನೆ

ಬೆಂಗಳೂರು: ಮೈಸೂರಿನಲ್ಲಿ ಆಗಸ್ಟ್ 30ರಂದು ನಡೆಯಲಿರುವ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನೆ ಸಮಾರಂಭದ ಸಿದ್ಧತೆಗಳನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಗುರುವಾರ ಪರಿಶೀಲನೆ ನಡೆಸಲಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹಾದೇವಪ್ಪ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ. ಬೆಳಗ್ಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ತೆರಳಲಿರುವ ಡಿ.ಕೆ.ಶಿವಕುಮಾರ, 11.30ಕ್ಕೆ ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಚಿವರು, ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.
ಸಂಜೆ 4 ಗಂಟೆಗೆ ಮೈಸೂರಿನಿಂದ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ