ಗೃಹಲಕ್ಷ್ಮಿ ಯೋಜನೆ: ಎಷ್ಟು ಜನರಿಗೆ ಹಣ ಹೋಗಿಲ್ಲ? ಕಾರಣವೇನು? ಸಮಗ್ರ ಮಾಹಿತಿ ಇಲ್ಲಿದೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಅಡಿ ಈವರೆಗೆ 9,44,155 ಅರ್ಜಿದಾರರಿಗೆ ಹಣ ಹೋಗಿಲ್ಲ. ಇದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಸೂಕ್ತ ಕಾರಣಗಳನ್ನು ನೀಡಿದ್ದಾರೆ. 3082 ಅರ್ಜಿದಾರರು ಮರಣ ಹೊಂದಿದ್ದರಿಂದ ಅವರನ್ನು ಅನರ್ಹಗೊಳಿಸಲಾಗಿದೆ. 1,59,356 ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. ಫಲಾನುಭವಿಗಳ ಆಧಾರ್ ಹಾಗೂ ಬ್ಯಾಂಕ್ ಖಾತೆ … Continue reading ಗೃಹಲಕ್ಷ್ಮಿ ಯೋಜನೆ: ಎಷ್ಟು ಜನರಿಗೆ ಹಣ ಹೋಗಿಲ್ಲ? ಕಾರಣವೇನು? ಸಮಗ್ರ ಮಾಹಿತಿ ಇಲ್ಲಿದೆ