*ಮೈಸೂರಲ್ಲಿ ಗೃಹಲಕ್ಷ್ಮೀ ಯೋಜನೆ ಪೂರ್ವಸಿದ್ಧತಾ ಸಭೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
ಗೃಹ ಲಕ್ಷ್ಮಿ ಯೋಜನೆಯ ಕಾರ್ಯಕ್ರಮ ಯಶಸ್ವಿಗೊಳಿಲು ಕರೆ
ಪ್ರಗತಿವಾಹಿನಿ ಸುದ್ದಿ; ಮೈಸೂರು: ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೊಳಿಸುತ್ತಿರುವ ಗೃಹ ಲಕ್ಷ್ಮಿ ಯೋಜನೆಯನ್ನು ಆಗಸ್ಟ್ 30 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಅದ್ಧೂರಿ ಸಮಾರಂಭದ ಮೂಲಕ ಉದ್ಘಾಟಿಸಲಾಗುತ್ತಿದೆ. ಈ ವೇಳೆ ಏಕಕಾಲದಲ್ಲಿ ಕೋಟ್ಯಂತರ ಮಹಿಳೆಯರ ಬ್ಯಾಂಕ್ ಖಾತೆಗೆ ಎರಡು ಸಾವಿರ ರೂಪಾಯಿ ಹಣ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಜಿಲ್ಲಾ ಪಂಚಾಯಿತಿ ಸಂಭಾಗಣದಲ್ಲಿ ಭಾನುವಾರ ನಡೆದ ಯೋಜನೆಯ ಪೂರ್ವಸಿದ್ಧತಾ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಸಚಿವರು, ಅಂದು ನಡೆಯಲಿರುವ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ ಎಂದರು.
ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಿಂದ ಸುಮಾರು ಒಂದೂವರೆ ಲಕ್ಷ ಫಲಾನುಭವಿಗಳು ಭಾಗವಹಿಸಲಿದ್ದಾರೆ. ಸ್ಥಳೀಯ ಶಾಸಕರು, ಅಧಿಕಾರಿಗಳು ಸಂಪೂರ್ಣ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ಸಚಿವರು ವಿವರಿಸಿದರು.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ.ಮಹದೇವಪ್ಪನವರ ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿಗಳ ತವರೂರಿನಲ್ಲಿ ಸಮಾರಂಭದಲ್ಲಿ ನಡೆಯುತ್ತಿದ್ದು, ತುಂಬಾ ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆಯಲಿದೆ ಎಂದು ಸಚಿವರು ತಿಳಿಸಿದರು.
ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಶಾಸಕರಾದ ಡಿ.ರವಿಶಂಕರ್, ಹರೀಶ್ ಗೌಡ, ದರ್ಶನ್ ಧ್ರುವ ನಾರಾಯಣ್ , ಮೈಸೂರು ಜಿಲ್ಲಾಧಿಕಾರಿ ರಾಜೇಂದ್ರ, ಮಂಡ್ಯ ಜಿಲ್ಲಾಧಿಕಾರಿ ಕುಮಾರ್ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದೇ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಆಗಸ್ಟ್ 30 ರಂದು ನಿಗದಿಯಾಗಿರುವ ಗೃಹ ಲಕ್ಷ್ಮಿ ಯೋಜನೆಯ ಸಮಾರಂಭ ನಡೆಯಲಿರುವ
ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಸಿದ್ಧತೆಗಳನ್ನು ವೀಕ್ಷಿಸಿದರು.
ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಶಾಸಕರಾದ ಡಿ.ರವಿಶಂಕರ್, ಹರೀಶ್ ಗೌಡ, ದರ್ಶನ್ ಧ್ರುವ ನಾರಾಯಣ್ , ಮೈಸೂರು ಜಿಲ್ಲಾಧಿಕಾರಿ ರಾಜೇಂದ್ರ, ಮಂಡ್ಯ ಜಿಲ್ಲಾಧಿಕಾರಿ ಕುಮಾರ್ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ