ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಂದಿನ ತಿಂಗಳು ಮದುವೆಗಾಗಿ ಭರ್ಜರಿ ಸಿದ್ಧತೆ ನಡೆಸಿದ್ದ ವರ ಇದೀಗ ಕೊರೊನಾ ಸೋಂಕಿಗೆ ಬಲಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
28 ವರ್ಷದ ಐಟಿ ಉದ್ಯೋಗಿ ಸಾಗರ್ ಮೃತ ಯುವಕ. ಸಾಗರ್ ಗೆ ಮುಂದಿನ ತಿಂಗಳು ಮದುವೆ ಮಾಡಲು ಸಿದ್ಧತೆ ನಡೆಸಲಾಗಿತ್ತು. ಆದರೆ 4 ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿತ್ತು. ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ವ್ಯವಸ್ಥೆ ಸಿಗದೇ ಪರದಾಡಿದ್ದು, ಕೊನೆಗೂ ಸೂಕ್ತ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ.
ಏಪ್ರಿಲ್ 12ರಂದು ನಡೆಸಿದ್ದ ಕೋವಿಡ್ ಟೆಸ್ಟ್ ನಲ್ಲಿ ಸಾಗರ್ ಗೆ ನೆಗೆಟಿವ್ ಬಂದಿತ್ತು. ಆದರೆ ಕೆಲ ದಿನಗಳಿಂದ ಸಾಗರ್ ಜ್ವರದಿಂದ ಬಳಲುತ್ತಿದ್ದ ಹೀಗಾಗಿ ಮತ್ತೆ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಬಂದಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ