ಪ್ರಗತಿವಾಹಿನಿ ಸುದ್ದಿ: ನೇಹಾ ಹತ್ಯೆ, ಅಂಜಲಿ ಹತ್ಯೆಯಂತಹ ಪ್ರಕರಣಗಳ ಬಳಿಕ ನಾಲ್ವರು ಪೊಲೀಸ್ ಅಧಿಕಾರಿಗಳು ಅಮಾನತುಗೊಂಡಿದ್ದರೂ ಹುಬ್ಬಳ್ಳಿ-ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಸರಿದಾರಿಗೆ ಬಂದಂತೆ ಕಾಣುತ್ತಿಲ್ಲ. ಮಹಿಳೆಯೊಬ್ಬರನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ.
ಹುಬ್ಬಳ್ಳಿಯ ಮಾರುತಿ ನಗರದ ಎರಡನೇ ಕ್ರಾಸ್ ಬಳಿ ಕ್ಷುಲ್ಲಕ ಕಾರಣಕ್ಕಾಗಿ ಮಹಿಳೆಯೊಬ್ಬರನ್ನು ಅರೆಬೆತ್ತಲೆಗೊಳಿಸಿ ಎಂಟು ಜನರ ಗುಂಪೊಂದು ಹಲ್ಲೆ ನಡೆಸಿದೆ. ಮೇ 25ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಎಲಿಜಬೆತ್ ಎಂಬ ಮಹಿಳೆಯನ್ನು ಸಾರ್ವಜನಿಕ ಸ್ಥಳದಲ್ಲಿ ಗುಂಪೊಂದು ಹಲ್ಲೆ ನಡೆಸಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಕಾಶ ಕಾಳೆ, ಸಾಗರ, ನಾಗರತ್ನ, ಪೂಜಾ, ಸೀನು, ರೇಣುಕಾ, ಶಾಂತಮ್ಮ ಹಾಗೂ ರಾಜೇಶ್ವರಿ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಹಲ್ಲೆ ನಡೆಸಿದ ಓರ್ವ ಮಹಿಳೆ ರಾಜೇಶ್ವರಿ ನಾಪತ್ತೆಯಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ