ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ತಾಲೂಕಿನ ರಣಕುಂಡೆಯಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ಸಂಭವಿಸಿದ್ದು, ನಾಲ್ವರಿ ಗಂಭೀರ ಗಾಯಗೊಂಡಿದ್ದಾರೆ. ಗ್ರಾಮದಲ್ಲಿ ತ್ವೇಷಮಯ ವಾತಾವರಣ ನಿರ್ಮಾಣವಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಧಾವಿಸಿದ್ದಾರೆ.
ದೇವಸ್ಥಾನ ನಿರ್ಮಾಣ ಸಂಬಂಧ ಗಲಾಟೆ ನಡೆದಿದೆ. ಒಂದು ಕೋಮಿನವರು ದೇವಸ್ಥಾನ ನಿರ್ಮಾಣಕ್ಕೆ ಸಿದ್ಧತೆ ನಡೆಸುತ್ತಿದ್ದಂತೆ ಹತ್ತಿರದಲ್ಲೇ ಇದ್ದ ಪ್ರಾರ್ಥನಾ ಮಂದಿರಕ್ಕೆ ಸಂಬಂಧಿಸಿದವರು ಆಕ್ಷೇಪಿಸಿದ್ದಾರೆ. ಇದರಿಂದಾಗಿ ಜಗಳ ಆರಂಭವಾಗಿ ಮಾರಾ ಮಾರಿ ನಡೆದಿದೆ.
ಮಾರಾಮಾರಿಯಲ್ಲಿ 4 -5 ಜನರಿಗೆ ಗಾಯಗಳಾಗಿದ್ದು ಬೆಳಗಾವಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಮತ್ತು ಆಸ್ಪತ್ರೆಯ ಬಳಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಡಿಸಿಪಿ ವಿಕ್ರಂ ಅಮಟೆ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಆದಾಗ್ಯೂ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ತಪ್ಪಿತಸ್ಥರನ್ನು ಬಂಧಿಸಲು ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಹೆಚ್ಚಿನ ಪೊಲೀಸರನ್ನು ಸ್ಥಳಕ್ಕೆ ಕರೆಸಲಾಗುತ್ತಿದೆ.
ಎತ್ತಿನ ಗಾಡಿ ಜಂಗೀ ಶರ್ಯತ್ತು ಉದ್ಘಾಟಿಸಿದ ಚನ್ನರಾಜ ಹಟ್ಟಿಹೊಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ