Uncategorized

*ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲೇಬೇಕು; ಇಂಧನ ಸಚಿವ ಕೆ.ಜೆ.ಜಾರ್ಜ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಅರ್ಜಿ ಸಲ್ಲಿಕೆಗೆ ಡೆಡ್ ಲೈನ್ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಇಂಧನ ಸಚಿವರು, ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಬೇಕು. ಆದರೆ ಡೆಡ್ ಲೈನ್ ಇಲ್ಲ. ಈಗಗಾಲೇ 86.5 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ ಎಂದರು.

ಜೂನ್ ತಿಂಗಳ ವಿದ್ಯುತ್ ಬಿಲ್ ಜುಲೈ ತಿಂಗಳಿಗೆ ಬರುತ್ತೆ. ಜುಲೈ ತಿಂಗಳಿಂದ ಎಲ್ಲಾ ಫಲಾನುಭವಿಗಳಿಗೆ ಉಚಿತ ವಿದ್ಯುತ್. ಗೃಹಜ್ಯೋತಿ ಲಾಭ ಪಡೆಯಲು ಎಲ್ಲರೂ ಅರ್ಜಿ ಹಾಕಲೇಬೇಕು. ಅರ್ಜಿ ಹಾಕಿದರೆ ಮುಂದಿನ ತಿಂಗಳು ಅನ್ವಯವಾಗುತ್ತೆ. ಆದಷ್ಟು ಬೇಗ ಅರ್ಜಿ ಸಲ್ಲಿಸಿದರೆ ಒಳ್ಲೆಯದು ಎಂದು ಹೇಳಿದರು.


Related Articles

Back to top button