Latest

*ಗೃಹಜ್ಯೋತಿ ಯೋಜನೆಗೆ ಮಾರ್ಗಸೂಚಿ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮೂಲಭೂತ ಸೌಕರ್ಯಗಳಲ್ಲಿ ಒಂದಾದ ವಿದ್ಯುಚ್ಛಕ್ತಿಯನ್ನು ಉಚಿತವಾಗಿ ರಾಜ್ಯದ ನಾಗರೀಕರಿಗೆ ಒದಗಿಸಲು ದಿನಾಂಕ:10.05.2023 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗೃಹ ಜ್ಯೋತಿ ಯೋಜನೆಯಡಿ ತಾತ್ವಿಕ ಅನುಮೋದನೆ ನೀಡಿದೆ.

ಈ ಸಂಬಂಧ ಆಡಳಿತ ಇಲಾಖೆಯು ಸರ್ಕಾರದ ಆದೇಶ ಹೊರಡಿಸಿದ್ದು,  ಆದೇಶದಲ್ಲಿ ಗೃಹ ಜ್ಯೋತಿ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುಸರಿಸಬೇಕಾದ ಕಾರ್ಯವಿಧಾನ ಮತ್ತು ಪಾಲಿಸಬೇಕಾದ ಷರತ್ತು ಮತ್ತು ನಿಭಂದನೆಗಳ ಬಗ್ಗೆ ಸರ್ಕಾರದಿಂದ ಪ್ರತ್ಯೇಕವಾಗಿ ಆದೇಶ ಹೊರಡಿಸಲಾಗಿದೆ.

ಗೃಹ ಜ್ಯೋತಿ ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಅರ್ಥಿಕ ವರ್ಷ 2022-23ರ ಬಳಕೆಯ ಆಧಾರದನ್ವಯ) ಶೇಕಡ 10 ರಷ್ಟು ಹೆಚ್ಚಿನ ವಿದ್ಯುತ್ ಬಳಕೆಯ ಮಿತಿಯನ್ನು ಅನುಮತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು ಹಾಗೂ 200 ಯೂನಿಟ್‌ಗಳು ಬಳಕೆಯನ್ನು ಮೀರಿದ ಗ್ರಾಹಕರು  ವಿದ್ಯುತ್ ಬಿಲ್ಲನ್ನು ಪಾವತಿಸಲು  ಅನುಮೋದಿಸಿದೆ.

ಸದರಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದ ಸಹಾಯಧನ ಮೊತ್ತವನ್ನು ಹಾಗೂ ನಿಗದಿಯಾಗುವ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚದ ಹೊಂದಾಣಿಕ ಶುಲ್ಕ (FPPCA -Fuel and Power Purchase Cost Adjustment) ಒಳಗೊಂಡಂತೆ ಒಟ್ಟು ಸಹಾಯಧನವನ್ನು ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರದಿಂದ ಮುಂಗಡವಾಗಿ ಒದಗಿಸಲಾಗುವುದು.

ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ / ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯಡಿಯ ಪಲಾನುಭವಿಗಳನ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡೆಗೊಳಿಸಲಾಗಿದೆ.

ಈ ಯೋಜನೆಯನ್ನು ಜುಲೈನಿಂದ ಜಾರಿಯಾಗಲಿದ್ದು  ಆಗಸ್ಟ್  ತಿಂಗಳಿಂದ ನೀಡುವ ಬಿಲ್ಲಿಗೆ ಅನ್ವಯವಾಗುವಂತೆ ಈ ಕೆಳಕಂಡ ಪರತ್ತುಗಳೊಂದಿಗೆ ಜಾರಿಗೆ ತರಲು ಆದೇಶಿಸಿದೆ

ಈ ಯೋಜನೆಯನ್ನು ಜುಲೈ 2023ರ ತಿಂಗಳ ವಿದ್ಯುತ್‌ ಬಳಕೆಗೆ ಆಗಸ್ಟ್ 2023ರ ತಿಂಗಳಿಂದ ನೀಡುವ ಬಿಲ್ಲಿಗೆ ಅನ್ವಯವಾಗುವಂತೆ ಈ ಕೆಳಕಂಡ ಷರತ್ತುಗಳೊಂದಿಗೆ ಜಾರಿಗೆ ತರಲು ಆದೇಶಿಸಿದೆ.

1. ಈ ಯೋಜನೆಯು ಗೃಹ ಬಳಕೆಯ ವಿದ್ಯುತ್‌ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುತ್ತದೆ; ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಉಪಯೋಗಿಸಿದಲ್ಲಿ ಅನ್ವಯವಾಗುವುದಿಲ್ಲ.

2. ಪ್ರತಿ ತಿಂಗಳ ಮಿಟರ್ ರೀಡಿಂಗ್ ಮಾಡಿದಾಗ, ಒಟ್ಟು ವಿದ್ಯುತ್‌ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸುವುದು.

3. ಗೃಹ ವಿದ್ಯುತ್‌ ಬಳಕೆದಾರನ ಅರ್ಹ ಮೊತ್ತವನ್ನು ಬಿಲ್‌ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು

ಗ್ರಾಹಕರಿಗೆ net bill ನೀಡುವುದು ಹಾಗೂ ಗ್ರಾಹಕರು net bill ನ್ನು ಪಾವತಿಸುವುದು.

4. ಅರ್ಹ ಯೂನಿಟ್ / ಮೊತ್ತಕ್ಕಿಂತ ಒಳಗೆ ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ಲನ್ನು ನೀಡಲಾಗುವುದು.

5. ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು.

6. ಪ್ರತಿ ಫಲಾನುಭವಿಯು ತನ್ನ Customer ID / Account ID ಅನ್ನು ಆಧಾರ್‌ಗೆ ಕಡ್ಡಾಯವಾಗಿ ಜೋಡಣೆ ಮಾಡುವುದು,

7. ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ / ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ

ಯೋಜನೆಯ ಫಲಾನುಭವಿ ಗ್ರಾಹಕರುಗಳನ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡಿಸುವುದು.

8. ದಿನಾಂಕ 30.06.2023ರ ಅಂತ್ಯಕ್ಕೆ (ಜೂನ್ 2023ರ ಮಾಹೆಯಲ್ಲಿ ಬಳಸಿದ ವಿದ್ಯುತ್‌ ಪ್ರಮಾಣಕ್ಕೆ ಜುಲೈ 2023ರಲ್ಲಿ ವಿತರಿಸಿದ ಬಿಲ್ಲಿನ ಮೊತ್ತ ಒಳಗೊಂಡಂತೆ) ಬಾಕಿ ಇರುವ ವಿದ್ಯುತ್ ಶುಲ್ಕದ ಬಾಕಿ ಮೊತ್ತವನ್ನು 3 ತಿಂಗಳೊಳಗೆ ಪಾವತಿಸತಕ್ಕದ್ದು. ಬಾಕಿ ಮೊತ್ತವನ್ನು ನಿಗಧಿತ ಅವಧಿಯೊಳಗೆ ಪಾವತಿಸದಿದ್ದಲ್ಲಿ ಅಂತಹ ಗ್ರಾಹಕರ ವಿದ್ಯುತ್‌ ಸ್ಥಾವರಗಳ ಸಂಪರ್ಕವನ್ನು ಕಡಿತಗೊಳಿಸಲಾಗುವುದು.

9. ಗೃಹ ವಿದ್ಯುತ್‌ ಗ್ರಾಹಕರ ಸ್ಥಾವರಗಳಿಗೆ ಮಾಪಕವನ್ನು ಅಳವಡಿಸುವುದು ಹಾಗೂ ಮಾಪಕ ಓದುವುದು ಕಡ್ಡಾಯವಾಗಿರುತ್ತದೆ. 10. ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ, ಒಂದು ಸ್ಥಾವರಕ್ಕೆ ಮಾತ್ರ

ಈ ಯೋಜನೆಯಡಿಯ ಸೌಲಭ್ಯಕ್ಕೆ ಅರ್ಹರಾಗುವರು. ಗ್ರಾಹಕನಿಗೆ ನೀಡಿದ ಉಚಿತ ಮೊತ್ತವನ್ನು ಸರ್ಕಾರದಿಂದ ವಿದ್ಯುತ್‌ ಸರಬರಾಜು ಕಂಪನಿಗಳಿಗೆ ಸಹಾಯಧನದ ಮೂಲಕ ಪಾವತಿಸಲಾಗುವುದು.

ಗೃಹಜ್ಯೋತಿ ಯೋಜನೆ ಮಾರ್ಗಸೂಚಿ ವಿವರಗಳಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

 

Adobe Scan Jun 05, 2023

 

https://pragati.taskdun.com/sirsivriksharopanahukkeri-shree/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button