ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.
ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ಇಂದಿನಿಂದ ಆರಂಭವಾಗಿದ್ದು, ಬೆಂಗಳೂರಿನ ಎಂ.ಜಿ.ರಸ್ತೆಯ ಬೆಸ್ಕಾಂ ಪ್ರಾದೇಶಿಕ ಕಚೇರಿಯಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸಲಾಗಿದೆ.
ಸೇವಾಸಿಂಧು ಪೋರ್ಟಲ್ ಮೂಲಕವೂ ಅರ್ಜಿ ನೋಂದಣಿ ಮಾಡಬಹುದಾಗಿದೆ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡಕಚೇರಿಗಳಲ್ಲಿಯೂ ಅರ್ಜಿ ಸಲ್ಲಿಸಬಹುದು.
ಆಧಾರ್ ಕಾರ್ಡ್, ಆರ್ ಆರ್ ನಂಬರ್, ಮೊಬೈಲ್ ಸಂಖ್ಯೆ, ಮನೆ ಬಾಡಿಗೆ ಕರಾರು ಪತ್ರ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಸೇವಾ ಸಿಂಧು ಆಪ್ ಮೂಲಕ ಅರ್ಜಿ ಸಲ್ಲಿಸುವವರು ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್ ಮೂಲಕ ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ ವಿಳಾಸ http://sevasindhugs.karnataka.gov.in ಗೆ ಲಾಗ್ ಇನ್ ಆಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1912 ಖ್ಯೆಗೆ ಸಂಪರ್ಕಿಸಬಹುದು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ