Latest

*ಗೃಹಲಕ್ಷ್ಮೀ ಹಣದಿಂದ ಶಾಲೆಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ ಮಹಿಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಸಾಕಷ್ಟು ಮಹಿಳೆಯರಿಗೆ ಜೀವನಾಧಾರವಾಗಿದೆ. ಅದೆಷ್ಟೋ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಿಂದ ಗ್ರಂಥಾಲಯ ನಿರ್ಮಾಣ, ಜಮೀನಿಗೆ ಬೋರ್ ಕೊರೆಸುವುದು, ಬಟ್ಟೆ ಅಂಗಡಿ, ಫ್ರಿಡ್ಜ್, ವಾಷಿಂಗ್ ಮಷಿನ್ ಹೀಗೆ ಹಲವಾರು ವಸ್ತುಗಳನ್ನು ಖರೀದಿ ಮಾಡಿದ್ದಾರೆ. ಇಲ್ಲೋರ್ವ ಮಹಿಳೆ ಗೃಹಲಕ್ಷ್ಮೀ ಹಣದಿಂದ ಶಾಲೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಸಿದ್ದಾರೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬ್ಬಾಬುರಾಮನಕೊಪ್ಪಲು ಗ್ರಾಮದ ಮಹಿಳೆ ವಿಜಯಲಕ್ಷ್ಮೀ ತಮಗೆ ಬರುತ್ತಿದ್ದ ಗೃಹಲಕ್ಷ್ಮೀ ಯೋಜನೆ ಹಣದಿಂದ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ್ದಾರೆ.

ನೀರಿನ ಟ್ಯಾಂಕ್ ಜೊತೆಗೆ ವಾಟರ್ ಫಿಲ್ಟರ್ ಕೊಡಿಸಿದ್ದು, ಇದರಿಂದ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಅನುಕೂಲವಾಗಿದೆ. ಇದಕ್ಕಾಗಿ 50 ಸಾವಿರ ರೂಪಾಯಿ ಖರ್ಚಾಗಿದೆ. ಗೃಹಲಕ್ಷ್ಮೀ ಹಣದಿಂದ 30 ಸಾವಿರ ರೂಪಾಯಿ ಹಾಗೂ ತಮ್ಮ ಸ್ವಂತ ಹಣ 20 ಸಾವಿರ ರೂ.ಸೇರಿಸಿ ಶಾಲಾ ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಸಿದ್ದಾಗಿ ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button