’ಗೃಹಲಕ್ಷ್ಮೀ’ ದಸರಾ ಸಂಭ್ರಮ ಮಗನಿಗೆ ಬೈಕ್ ಕೊಡಿಸಿದ ತಾಯಿ

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ‘ಗೃಹಲಕ್ಷ್ಮೀ’ ಯೋಜನೆಯ ಹಣವನ್ನು ಕೂಡಿಟ್ಟು, ಬೆಳಗಾವಿ ಜಿಲ್ಲೆಯಲ್ಲಿ ತಾಯಿಯೊಬ್ಬಳು ತನ್ನ ಮಗನಿಗೆ ಬೈಕ್ ಕೊಡಿಸುವ ಮೂಲಕ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಗೋಕಾಕ್ ತಾಲ್ಲೂಕಿನ ಕೌಜಲಗಿ ಗ್ರಾಮದ ಬಾಗವ್ವಾ ನೀಲಪ್ಪ ಸಣ್ಣಕ್ಕಿ ಎಂಬ ಮಹಿಳೆ, ತನ್ನ ಮಗ ರಮೇಶ ನೀಲಪ್ಪ ಸಣ್ಣಕ್ಕಿಗೆ ದ್ವಿಚಕ್ರ ವಾಹನ ಕೊಡಿಸಿದ್ದಾರೆ. ಶುಕ್ರವಾರ ಆಯುಧ ಪೂಜೆ ದಿನದಂದು ಶೋ ರೂಮಿನಿಂದ ಬೈಕ್ ಖರೀದಿಸಿ, ಪೂಜೆ ಮಾಡಿ ಸಂಭ್ರಮಿಸಿದ್ದಾರೆ.Home add -Advt ಗೃಹಲಕ್ಷ್ಮೀ ಯೋಜನೆಯ ಹಣ … Continue reading ’ಗೃಹಲಕ್ಷ್ಮೀ’ ದಸರಾ ಸಂಭ್ರಮ ಮಗನಿಗೆ ಬೈಕ್ ಕೊಡಿಸಿದ ತಾಯಿ