
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗೃಹಲಕ್ಷ್ಮೀ ಯೋಜನೆಗೆ ರಾಜ್ಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದ್ದು, ಈವರೆಗೆ 49,77,837 ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ.
ಇಂದು ಸಂಜೆ 6.30ರ ವೇಳೆಗೆ ಗೃಹಲಕ್ಷ್ಮೀ ಯೋಜನೆಗೆ 10,81,402 ಮಹಿಳೆಯರಿಂದ ನೋಂದಣಿ ನಡೆದಿದೆ. ಜುಲೈ 19ರಿಂದ ಗೃಹಲಕ್ಷ್ಮೀ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಒಟ್ಟಾರೆ ಇದುವರೆಗೂ 49,77,837 ಮಹಿಳೆಯರಿಂದ ಅರ್ಜಿ ಸಲ್ಲಿಕೆಯಾಗಿದೆ.
ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಮಹಿಳೆಯರಿಗೆ ಮಾಸಿಕ 2000 ರೂಪಾಯಿ ಸಹಾಯಧನ ನೀಡುವ ಮಹತ್ವದ ಯೋಜನೆಯಾಗಿದೆ. ಈ ಯೋಜನೆಗೆ ಗ್ರಾಮ್ ಒನ್, ಕರ್ನಾಟಕ ಒನ್, ಸೇವಾ ಸಿಂಧು ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ